ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಮಹಿಳಾ ಹೆಡ್ ಕಾನ್ಸ್ಟೇಬಲ್ ನಯನ ಆಯ್ಕೆ

Spread the love

ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಮಹಿಳಾ ಹೆಡ್ ಕಾನ್ಸ್ಟೇಬಲ್ ನಯನ ಆಯ್ಕೆ

ಮಂಗಳೂರು: ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತರು ‘ದಿನದ ಕೊವಿಡ್ ವಾರಿಯರ್’ ಎಂದು ಗೌರವಿಸಲಿದ್ದಾರೆ.

ಅದರಂತೆ ಸೋಮವಾರ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಹಿಳಾ ಹೆಡ್ ಕಾನ್ಸ್ಟೇಬಲ್ ನಯನ ಅವರನ್ನು ‘ವಾರಿಯರ್ ಆಫ್ ದಿ ಡೇ’ ಎಂದು ಗುರುತಿಸಲಾಗಿದೆ.

ನಯನ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಹಿಳಾ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರು ಪ್ರಸ್ತುತ ಕೋವಿಡ್-19ಗೆ ಸಂಬಂದಿಸಿದ ವೆನ್ಲಾಕ್ ಆಸ್ಪತ್ರೆಯ ಕೋವಿಡ್-19ನ ವಿಶೇಷ ಕಟ್ಟಡ ಆಯುಷ್ ಬಿಲ್ಡಿಂಗ್ ನ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ವೆನ್ಲಾಕ್ ಆಸ್ಪತ್ರೆಯ ಆಯುಷ್ ಬಿಲ್ಡಿಂಗ್ ನಲ್ಲಿ ಕೊರೋನಾ ವೈರಸ್ ದೃಢಪಟ್ಟ ರೋಗಿಗಳು ಮತ್ತು ಕೊರೋನಾ ವೈರಸ್ ಇರುವ ಬಗ್ಗೆ ಸಂಶಯಾಸ್ಪದ ರೋಗಿಗಳನ್ನು ಚಿಕಿತ್ಸೆ ನೀಡುವ ಬಿಲ್ಡಿಂಗ್ ನಲ್ಲಿ ಸದರಿಯವರು ತಮ್ಮ ಸ್ವಇಚ್ಛೆಯಿಂದ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ.

ನಯನ ಮಹಿಳಾ ಹೆಡ್ ಕಾನ್ಸ್ಟೇಬಲ್ ರವರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಹಾಗೂ ಚಿಕಿತ್ಸೆ ಪಡೆದು ಗುಣಮುಖಗೊಂಡು ಬಿಡುಗಡೆ ಹೊಂದಿರುವವರ ಸ್ವ-ವಿವರವುಳ್ಳ ಮಾಹಿತಿಯನ್ನು ಆಸ್ಪತ್ರೆಯಿಂದ ಪಡೆದು ಕ್ಲಿಪ್ತ ಸಮಯದಲ್ಲಿ ಸಂಬಂದಪಟ್ಟ ಪೊಲೀಸ್ ಠಾಣೆಗಳಿಗೆ ನಿಗಾವಹಿಸಲು ಹಾಗೂ ಮೇಲಾಧಿಕಾರಿಗಳಿಗೆ ಮಾಹಿತಿಯನ್ನು ನೀಡುವಲ್ಲಿ ಉತ್ತಮ ಕೆಲಸ ಮಾಡಿರುತ್ತಾರೆ. ಆಸ್ಪತ್ರೆಯ ವೈದ್ಯರೊಂದಿಗೆ ಹಾಗೂ ಸಿಬ್ಬಂದಿಯವರಲ್ಲಿ ಉತ್ತಮ ಒಡನಾಟವಿದ್ದು ವೆನ್ಲಾಕ್ ಆಸ್ಪತ್ರೆಯನ್ನು ಕೋವಿಡ್-19 ಚಿಕಿತ್ಸೆಗೆ ಮೀಸಲಿರಿಸಿದ್ದರಿಂದ, ಇತರೆ ಖಾಯಿಲೆಯ ಚಿಕಿತ್ಸೆಗೆಂದು ಬರುವ ರೋಗಿಗಳ ಬಗ್ಗೆ ವೈದ್ಯರೊಂದಿಗೆ ಸಮಾಲೋಚಿಸಿ ವೈದ್ಯರ ಸೂವನೆಯಂತೆ ಬೇರೆ ಆಸ್ಪತ್ರೆಗೆ ಚಿಕಿತ್ಸೆಯ ಬಗ್ಗೆ ಸಂಪರ್ಕಿಸುವ ಕುರಿತು ಸಲಹೆ ನೀಡುತ್ತಿರುವ ಇವರನ್ನು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳಿಂದ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.


Spread the love