ಮಂಗಳೂರು: ವಿಜ್ಞಾನದ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ  – ಡಾ. ಅರುಣ್ ಎಂ ಇಸ್ಲೂರ್ 

Spread the love

ಮಂಗಳೂರು: ವಿಜ್ಞಾನದ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ  – ಡಾ. ಅರುಣ್ ಎಂ ಇಸ್ಲೂರ್ 

ಮಂಗಳೂರು:  ಡಾ. ಪಿ. ದಯಾನಂದ ಪೈ-ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

ಸಂಪನ್ಮೂಲ ವ್ಯಕಿಯಾಗಿ ಆಗಮಿಸಿದ ಎನ್.ಐ..ಟಿ.ಕೆ ಸುರತ್ಕಲ್ ರಸಾಯನಶಾಸ್ತ್ರ ವಿಭಾಗದ ಡಾ. ಅರುಣ್ ಎಂ ಇಸ್ಲೂರ್ ಭಾಗವಹಿಸಿದ್ದರು. ಅವರು ನೋಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರ ಜೀವನ ಹಾಗೂ ಸಂಶೋಧನೆಯ ಕುರಿತು ಮತ್ತು ಮೂಲ ವಿಜ್ಞಾನ ಕ್ಷೇತ್ರದಲ್ಲಿ ಲಭ್ಯವಿರುವ ಶೈಕ್ಷಣಿಕ ಮತ್ತು ಸಂಶೋಧನಾ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಮೂಲ ವಿಜ್ಞಾನದ ಅಧ್ಯಯನದ ಕುರಿತು ವಿದ್ಯಾರ್ಥಿಗಳಲ್ಲಿ ಒಲವು ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಅವರು ಮೂಲ ವಿಜ್ಞಾನದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ತುಂಬಾ ಅವಕಾಶಗಳಿವೆ. ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಮೂಲಕ ಈ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ ವಹಿಸಿದ್ದರು. ಕಾಲೇಜಿನ ವಿಜ್ಞಾನ ಸಂಘದ ಸಂಯೋಜಕ ಡಾ. ರಮಾಕಾಂತ ಪುರಾಣಿಕ್ ಸ್ವಾಗತಿಸಿ, ವಿದ್ಯಾರ್ಥಿನಿ ಕು. ರಾಜೇಶ್ವರಿ ನಿರೂಪಿಸಿ, ಕು.ಅರ್ಚನಾ ವಂದಿಸಿದರು. ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ವಸಂತಿ ಪಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಾಷ್ಟ್ರೀಯ ವಿಜ್ಞಾನ ದಿನದಂದು ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಯಿತು.


Spread the love
Subscribe
Notify of

0 Comments
Inline Feedbacks
View all comments