Home Mangalorean News Kannada News ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!

Spread the love

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!

ಮಂಗಳೂರು: ಬಜ್ಪೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಸಿಐಎಸ್ ಎಫ್, ಭದ್ರತಾ ಪಡೆಗಳು ಸಂಪೂರ್ಣ ಪರಿಶೀಲನೆ ನಡಸಿವೆ. ಇದೊಂದು ಹುಸಿ ಬೆದರಿಕೆ ಎನ್ನಲಾಗಿದ್ದು ಭದ್ರತಾ ತಪಾಸಣೆ ಹೆಚ್ಚಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ್ ಅವರ ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿ, ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆಯೊಡ್ಡಿದ್ದಾನೆ. ಕೂಡಲೇ ಅವರು ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಹುಸಿ ಬಾಂಬ್ ಕರೆಯಾಗಿದೆ ಎಂದು ದೃಢಪಟ್ಟಿದೆ.


Spread the love

Exit mobile version