ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿಯ ಬಂಧನ

Spread the love

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಗಳ್ಳತನ ಮಾಡಿದ್ದ ಆರೋಪಿಯ ಬಂಧನ

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿದ್ದ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಹಳೆಯಂಗಡಿ ನಿವಾಸಿ ಅಬ್ದುಲ್ ರವೂಫ್ @ಆಟೋ ರವೂಫ್ (30) ಎಂದು ಗುರುತಿಸಲಾಗಿದೆ.

ಡಿಸೆಂಬರ್ 12 ರಂದು ಮದ್ಯಾಹ್ನ ಸುಮಾರು 12-40 ಗಂಟೆಗೆ ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್ ನಲ್ಲಿ ಬಂದ ವ್ಯಕ್ತಿ ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿರುತ್ತಾನೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಸುಲಿಗೆಗೆ ಸಂಬಂಧಿಸಿದಂತೆ ಕೇಸು ದಾಖಲಾಗಿರುತ್ತದೆ.

ಈ ಪ್ರಕರಣದಲ್ಲಿ ಆರೋಪಿ ಮತ್ತು ಸೊತ್ತು ಪತ್ತೆಯ ಬಗ್ಗೆ ವಿಶೇಷ ತಂಡ ರಚಿಸಿದ ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎನ್ ರವರು ವೃದ್ಧ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿದ್ದ ಆರೋಪಿತ ಅಬ್ದುಲ್ ರವೂಫ್ @ ಆಟೋ ರವೂಫ್ ಎಂಬಾತನನ್ನು ಪತ್ತೆ ಮಾಡಿ ಆರೋಪಿತನಿಂದ ಸುಮಾರು 70,000/- ರೂಪಾಯಿ ಮೌಲ್ಯದ ಚಿನ್ನದ ಸರ, 50,000/- ರೂಪಾಯಿ ಮೌಲ್ಯದ ಸ್ಕೂಟರ್, ಸುಮಾರು 50,000/- ರೂಪಾಯಿ ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿರುತ್ತಾರೆ. ಆರೋಪಿನು ಹಾಲಿ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುತ್ತಾನೆ. ಆರೋಪಿತನ ವಿರುದ್ಧ ಮೂಡುಬಿದ್ರೆ ಪೊಲೀಸ್ ಠಾಣೆ, ಮುಲ್ಕಿ ಪೊಲೀಸ್ ಠಾಣೆ, ಬಜಿಪೆ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ ಮತ್ತು ಹಾಸನ ಜಿಲ್ಲೆಯ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಒಟ್ಟು 10 ಸುಲಿಗೆ ಮತ್ತು ಕಳವಿಗೆ ಸಂಬಂಧಿಸಿದ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣಗಳಲ್ಲಿ ಆರೋಪಿತನು 02 ತಿಂಗಳ ಹಿಂದೆಯಷ್ಟೇ ಜಾಮೀನು ಪಡೆದುಕೊಂಡಿರುವುದು ತಿಳಿದು ಬಂದಿರುತ್ತದೆ.

ಈ ಪತ್ತೆ ಕಾರ್ಯವನ್ನು ಮಂಗಳೂರು ನಗರದಲ್ಲಿ ಕಾನೂನು ಸುವೆವಸ್ಥೆಯ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ IPS ರವರ ಮಾರ್ಗದರ್ಶನದಂತೆ, DCP ಯವರಾದ ಸಿದ್ಧಾರ್ಥ ಗೋಯೆಲ್ (ಕಾ&ಸು) ಮತ್ತು ದಿನೇಶ್ ಕುಮಾರ್ (ಅಪರಾಧ ಮತ್ತು ಸಂಚಾರ) ರವರ ನಿರ್ದೇಶನದಂತೆ, ಮಂಗಳೂರು ಉತ್ತರ ಉಪ ವಿಭಾಗದ ACP ಶ್ರೀಕಾಂತ K ಮತ್ತು ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ರವರ ನೇತೃತ್ವದಲ್ಲಿ PSI ರೇವಣಸಿದ್ದಪ್ಪ, PSI ಕುಮಾರೇಶನ್, PSI ಲತಾ, ಸಿಬ್ಬಂದಿಯವರಾದ ಸುಜನ್, ಮಂಜುನಾಥ, ರಶೀದ ಶೇಖ್, ಬಸವರಾಜ್ ಪಾಟೀಲ್, ಚಿದಾನಂದ, ಚಂದ್ರಕಾಂತ್, ಕೆಂಚಪ್ಪ, ಭರಮಾ ಬಡಿಗೇರ್, ದುರ್ಗಾ ಪ್ರಸಾದ, ಪ್ರೇಮ್ ಕುಮಾರ್, ವಿರುಪಾಕ್ಷ, ಪರಸಪ್ಪ, ಪ್ರಜ್ವಲ್ ಮತ್ತು ಇತರ ಸಿಬ್ಬಂದಿಗಳು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.


Spread the love
Subscribe
Notify of

0 Comments
Inline Feedbacks
View all comments