ಮಂಗಳೂರು: ಸಮಾಜ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್‍ಗೆ ಗುತ್ತಿಗೆ ಆಧಾರದ ಮೇರೆಗೆ ಸಮಾಜ ಕಾರ್ಯಕರ್ತೆ ಒಂದು ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜಕಾರ್ಯ/ ಸಮಾಜಶಾಸ್ತ್ರ/ ಸಮಾಜ-ವಿಜ್ಞಾನ/ಮನಶಾಸ್ತ್ರ ವಿಭಾಗದಲ್ಲಿ ಪದವೀಧರರಾಗಿರುವ ಹಾಗೂ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆ/ಯೋಜನೆಗಳಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಕನಿಷ್ಠ 3 ವರ್ಷಗಳ ಕೆಲಸದ ಅನುಭವ ಹೊಂದಿರುವ ಹಗಲು/ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ತಯಾರಿರುವ 20 ರಿಂದ 40 ವರ್ಷ ವಯಸ್ಸಿನೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗಳು ಎಪ್ರಿಲ್ 15 ರೊಳಗೆ ಸೂಕ್ತ ದಾಖಲೆಗಳೊಂದಿಗೆ ನಗರದ ಬಿಜೈ ಮೆಸ್ಕಾಂ ಬಳಿ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.