ಮಂಗಳೂರು: ಸವಿತಾ ಮಹರ್ಷಿ ಜಯಂತಿ ಆಚರಣೆ
ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಸವಿತಾ ಸಮಾಜದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿತಯು ಮಂಗಳವಾರ ನಗರದ ಸರಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ್ ಭಂಡಾರಿ ಹೊಸಬೆಟ್ಟು ಸವಿತಾ ಸಮಾಜ ಅತ್ಯಂತ ಕಡಿಮೆ ಜನರನ್ನು ಹೊಂದಿದೆ. ಈ ಸಮಾಜದ ಎಲ್ಲರೂ ಒಗ್ಗೂಡಿದರೆ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಲೇಖಕ ಟಿ.ಎ.ಎನ್. ಖಂಡಿಗೆ ಭಾಗವಹಿಸಿ ಮಾತನಾಡಿದರು.
ಶಾಸಕ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುರೇಶ್ ಭಂಡಾರಿ, ಮಾಜಿ ಮೇಯರ್ ದಿವಾಕರ್ ಪಂಡಿತ್, ವಸಂತ್ ಎಂ. ಬೆಳ್ಳೂರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.