ಮಂಗಳೂರು: ಸೆ.15 ರಂದು ಬೃಹತ್ ಮಾನವ ಸರಪಳಿ: ಯಶಸ್ವಿಗೊಳಿಸಲು ಕರೆ

Spread the love

ಸೆ.15 ರಂದು ಬೃಹತ್ ಮಾನವ ಸರಪಳಿ: ಯಶಸ್ವಿಗೊಳಿಸಲು ಕರೆ

ಮಂಗಳೂರು: ಸೆಪ್ಟೆಂಬರ್ 15 ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಸೂಚನೆ ನೀಡಿದರು.

ಅವರು ಮಂಗಳವಾರ ಮಂಗಳೂರು ತಾಲೂಕು ಪಂಚಾಯತ್ ಕಚೆರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಈಗಾಗಲೇ ಸೂಚಿಸಿರುವಂತೆ ಮಾನವ ಸರಪಳಿ ಕಾರ್ಯಕ್ರಮವನ್ನು ರಚಿಸಲು ಅಂತಿಮ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಮಾನವ ಸರಪಳಿ ರಚನೆ ಕುರಿತಂತೆ ಸಂಬಂಧಪಟ್ಟ ವ್ಯಾಪ್ತಿಯ ತಹಸೀಲ್ದಾರ್‍ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಓ ಗಳು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

ಎಲ್ಲಾ ಜನಪ್ರತಿನಿಧಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವ ಸಹಾಯ ಸಂಘಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ಆಚರಣೆ ಆಗುವಂತೆ ನೋಡಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸುವಂತೆ ತಿಳಿಸಿದರು.

ಕಾರ್ಯಕ್ರಮಕ್ಕೆ ಪೆÇಲೀಸ್ ಇಲಾಖೆ ವತಿಯಿಂದ ಅಗತ್ಯ ಭದ್ರತೆ ಒದಗಿಸುವಂತೆ ತಿಳಿಸಿದ ಉಪವಿಭಾಗಾಧಿಕಾರಿಗಳು, ಆರೋಗ್ಯ ಇಲಾಖೆಯ ಮೂಲಕ ಆರೋಗ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಕುರಿತಂತೆ, ಈ ಕಾರ್ಯಕ್ರಮದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಅವರು ತಿಳಿಸಿದರು.

ಸಭೆಯಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಸಹಾಯಕ ಪೊಲೀಸ್ ಆಯುಕ್ತೆ ನಝ್ಮಾ ಫಾರೂಖಿ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತತರರು ಇದ್ದರು.


Spread the love
Subscribe
Notify of

0 Comments
Inline Feedbacks
View all comments