ಮಂಗಳೂರು: 24ರಂದು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಮುಖ್ಯಮಂತ್ರಿ ಶಿಲಾನ್ಯಾಸ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಭವನದ ಶಿಲಾನ್ಯಾಸ ಸಮಾರಂಭ ಏ.24ರಂದು ಸಂಜೆ 4 ಗಂಟೆಗೆ ಜರುಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೇರವೇರಿಸಲ್ಲಿದ್ದಾರೆ ಎಂದು ಸಮಿತಿಯ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕೇಂದ್ರದ ಮಾಜಿ ಸಚಿವರಾದ ಎಂ. ವೀರಪ್ಪ ವೆೊಯಿಲಿ, ಆಸ್ಕರ್ ಫರ್ನಾಂಡಿಸ್, ಬಿ. ಜನಾರ್ದನ ಪೂಜಾರಿ, ಸಚಿವರಾದ ಬಿ. ರಮಾನಾಥ ರೈ, ಶ್ರೀನಿವಾಸ ಪ್ರಾಸಾದ್, ವಿನಯ ಕುಮಾರ್ ಸೊರಕೆ, ಯು.ಟಿ. ಖಾದರ್, ಅಭಯಚಂದ್ರ ಜೈನ್, ಮೇಯರ್ ಜೆಸಿಂತಾ ವಿಜಯ್ ಅಲ್ಪ್ರೆ ಡ್, ಶಾಸಕರಾದ ಜೆ.ಅರ್.ಲೋಬೊ, ವಸಂತ ಬಂಗೇರ, ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ, ಐವನ್ ಡಿಸೋಜ ಭಾಗವಹಿಸಲಿದ್ದಾರೆ ಎಂದರು.

ಮಲ್ಲಿಕಟ್ಟೆಯ ಲಯನ್ಸ್ ಕ್ಲಬ್ ಬಳಿ 9 ಸೆಂಟ್ಸ್ ಜಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಭವನ ನಿರ್ಮಾಣವಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಬಹಳ ಹಿಂದಿನ ಕನಸು ಇದಾಗಿತ್ತು. ಈ ಭವನವು ಕಚೇರಿ, ಮೀಟಿಂಗ್ ಹಾಲ್, ಪ್ರೆಸ್ ಕಾನ್ಫ್ಪರೆನ್ಸ್ಸ್ ಕೊಠಡಿ ಮುಂತಾದ ಸುಸಜ್ಜಿತ ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಹೇಳಿದರು.

ಮುಖಂಡರಾದ ಶಶಿಧರ ಹೆಗ್ಡೆ, ಪೌರಿಸ್ ರೋಡಿಗ್ರಸ್, ಟಿ.ಕೆ. ಸುಧೀರ್, ವಿಶ್ವಾಸ್ ದಾಸ್, ನಾಗೇಂದ್ರ ಕುಮಾರ್, ಪದ್ಮನಾಭ ನರಿಂಗಾನ, ಧರಣೇಂದ್ರ ಕುಮಾರ್, ನಝೀರ್ ಬಜಾಲ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


Spread the love