ಮಂಜೇಶ್ವರ| ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು

Spread the love

ಮಂಜೇಶ್ವರ| ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು

ಮಂಜೇಶ್ವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ.

ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರನ್ನು ಪೈವಳಿಕೆ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ಅವರ ಪುತ್ರ ವರುಣ್ ಮತ್ತು ಕಿಶನ್ ಎಂದು ಗುರುತಿಸಲಾಗಿದೆ. ರತ್ನಂ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿಗೆ ತೆರಳಬೇಕಿದ್ದ ಕಿಶನ್‌ರನ್ನು ಪೈವಳಿಕೆ ಬಾಯಿಕಟ್ಟೆಯಿಂದ ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿ ಹಳೆ ಚೆಕ್ ಪೋಸ್ಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ.


Spread the love