Home Mangalorean News Kannada News ಮಂಡ್ಯ | ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು : ಮೂವರು ಮೃತ್ಯು

ಮಂಡ್ಯ | ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು : ಮೂವರು ಮೃತ್ಯು

Spread the love

ಮಂಡ್ಯ | ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು : ಮೂವರು ಮೃತ್ಯು

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಬಳಿ ಶನಿವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.

ಕೆ.ಆ‌ರ್.ಪೇಟೆ ನಿವಾಸಿಗಳಾದ ಅನಿಕೇತನ್(30), ಪವನ್‌ಶೆಟ್ಟಿ(32) ಹಾಗೂ ಚಿರಂಜೀವಿ(32) ಘಟನೆಯಲ್ಲಿ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡಿರುವ ಸಾಗರ್ ಎಂಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ತಕ್ಷಣ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಆ ವೇಳೆಗೆ ಮೂವರು ಸಾವನ್ನಪ್ಪಿದ್ದರು.

ಕೆ.ಆ‌ರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version