ಮಂದಿರ ನಿರ್ಮಾಣಕ್ಕೆ ವಿರೋಧವಿಲ್ಲ: ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ
ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು. ದೇಶದಲ್ಲಿ ಯಾರದೂ ವಿರೋಧವಿಲ್ಲ. ಆದರೆ ಈ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಖಂಡನೀಯ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ, ಬಳಿಕ ಅದರ ಬಗ್ಗೆ ನಿರುತ್ಸಾಹ ತೋರಿದರು. ಅಬುಧಾಬಿಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಹೋಗಿರುವ ಅವರು ಅಯೋಧ್ಯೆ ಮರೆದಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಾಬರಿ ಮಸೀದಿ ಕೆಡಹುವ ಸಂದರ್ಭ ಮಂದಿರ ನಿರ್ಮಾಣ ವಿರೋಧಿಸಿದ್ದ ಜನಾರ್ದನ ಪೂಜಾರಿ ಈಗ ಮಂದಿರ ನಿರ್ಮಾಣ ಬೆಂಬಲಿಸುತ್ತಿದ್ದು, ಅವರು ಯಾವ ಪಕ್ಷದಲ್ಲಿದ್ದಾರೆಂಬುದು ಅರ್ಥವಾಗುತ್ತಿಲ್ಲ ಎಂದರು. ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ ಸರಿಯಲ್ಲ, ಈ ಬಗ್ಗೆ ಸಿಎಂ ಕುಮಾರಸ್ವಾಮಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಮುಖಂಡರಾದ ರಾಂ ಗಣೇಶ್, ಸುಶೀಲ್ ನೊರೊನ್ಹಾ, ಅಜೀಜ್ ಕುದ್ರೋಳಿ, ರಮೀಝಾ ಬಾನು, ಗೋಪಾಲಕೃಷ್ಣ ಅತ್ತಾವರ ಸುದ್ದಿಗೋಷ್ಠಿಯಲ್ಲಿದ್ದರು.