ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ 2020 ರ ನೋಂದಾವಣಿ ಪ್ರಕ್ರಿಯೆ ಪ್ರಾರಂಭ

Spread the love

ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ 2020 ರ ನೋಂದಾವಣಿ ಪ್ರಕ್ರಿಯೆ ಪ್ರಾರಂಭ

ಮಂಗಳೂರು : 2020 ರ ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯ ದಾಖಲಾತಿ ಪ್ರಾರಂಭವಾಗಿದೆ. ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ಮಣಿಪಾಲ ಆರೋಗ್ಯ ಕಾರ್ಡ್ 2020 ರ ನೋಂದಾವಣೆಗೆ ಚಾಲನೆಯನ್ನು ನೀಡಿದರು.

ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ವೈದ್ಯಕೀಯ ಅಧೀಕ್ಷಕರಾದ ಡಾ. ಜಾನ್ ರಾಮಪುರಮ್ ಮಾತನಾಡುತ್ತಾ “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ನಮ್ಮ ಸಂಸ್ಥೆಯ ಸಂಸ್ಥಾಪಕ, ದಿವಂಗತ ಡಾ. ಟಿಎಂಎ ಪೈಯವರ ಕನಸನ್ನು ಈಡೇರಿಸಲು, ಆರೋಗ್ಯ ಸೇವೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಮಣಿಪಾಲ ಆರೋಗ್ಯ ಕಾರ್ಡನ್ನು 2000ನೇ ಇಸವಿಯಲ್ಲಿ ಪ್ರಾರಂಭಿಸಲಾಯಿತು. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ ಗುಣಮಟ್ಟದ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನೀಡುವುದರ ಮೂಲಕ ಈ ಯೋಜನೆಗೆ ಹೆಚ್ಚು ಹೆಚ್ಚು ಸದಸ್ಯರನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದೇವೆ. 20ನೇ ವರ್ಷದ ಅಂಗವಾಗಿ, ನಾವು ಕಾರ್ಡ್‌ಗಳನ್ನು ಸುಲಭವಾಗಿ ನೋಂದಾಯಿಸಲು, ಸರಳ ಹಾಗೂ ಪೂರ್ವ ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಪರಿಚಯಿಸುತ್ತಿದ್ದೇವೆ ಮತ್ತು ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಕಾರ್ಡುದಾರರಿಗೆ ಸ್ಥಳದಲ್ಲೇ ನೀಡಲಾಗುವುದು ಮತ್ತು ಸ್ಮಾರ್ಟ್ ಕಾರ್ಡನ್ನು ತಮ್ಮ ಜೇಬುಗಳಲ್ಲಿ ಇಟ್ಟುಕೊಳ್ಳಬಹುದು.

ಕೆ.ಎಂ.ಸಿ. ಮಂಗಳೂರಿನ ರೀಜನಲ್ ಚೀಫ್ ಅಪರೇಟಿಂಗ್ ಆಫೀಸರ್ ಶ್ರೀ. ಸಘೀರ್ ಸಿದ್ಧಿಕಿಯವರು ಮಾತನಾಡಿ, “ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ” ಎಂದು ಅವರು ಹೇಳಿದರು.

“20ನೇ ವರ್ಷದ ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯು, ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯ ಜೊತೆಗೆ ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯನ್ನು ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹250/-, ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 500/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರಿಗೆ (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 650/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹400/, ಕುಟುಂಬಕ್ಕೆ ₹700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ₹ 850/- ಇರುತ್ತದೆ.

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಎಲ್ಲಾ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಹೊರರೋಗಿ ಸಮಾಲೋಚನೆ ಮೇಲೆ 50% ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಗಳ ಮೇಲೆ 20% ರಿಯಾಯಿತಿ, ವಿಕಿರಣಶಾಸ್ತ್ರ ಪರೀಕ್ಷೆಗಳ ಮೇಲೆ 20% ರಿಯಾಯಿತಿ, ಆಸ್ಪತ್ರೆಯ ಔಷಧಾಲಯದಿಂದ ಖರೀದಿಸಿದ ಔಷಧಿಗಳ ಮೇಲೆ 10%ರವರೆಗೆ ರಿಯಾಯಿತಿ ಹಾಗೂ ಹೊರರೋಗಿ ದಂತ ಚಿಕಿತ್ಸೆಗೆ 25% ರಿಯಾಯಿತಿಯು ಇರುತ್ತದೆ. ಒಂದೊಮ್ಮೆ ಜನರಲ್ ವಾರ್ಡ್ ನಲ್ಲಿ ಒಳರೋಗಿಯಾದ್ದಲ್ಲಿ ಉಪಯೋಗವಾಗುವ ವಸ್ತುಗಳು ಮತ್ತು ಮತ್ತು ಪ್ಯಾಕೇಜ್ಗಳನ್ನು ಹೊರತುಪಡಿಸಿ ಬಿಲ್ಲಿನಲ್ಲಿ 25% ರಿಯಾಯಿತಿ ಸಿಗುತ್ತದೆ. ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಹೆರಿಗೆ ಸೌಲ ಭ್ಯಗಳಿಗಾಗಿ ಜನರಲ್ ವಾರ್ಡ್ ನಲ್ಲಿ ದಾಖಲಾದಲ್ಲಿ (ಕನ್ಸ್ಯುಮೇಬಲ್ಸ್ ಮತ್ತು ಔಷಧಗಳನ್ನು ಹೊರತುಪಡಿಸಿ) 50% ರಿಯಾಯಿತಿಯೂ ಇರುತ್ತದೆ. ಮಣಿಪಾಲ್ ಆರೋಗ್ಯ ಕಾರ್ಡ್ ಹೊಂದಿರುವವರು ಕೆಎಂಸಿ ಆಸ್ಪತ್ರೆ ಅಂಬೇಡ್ಕರ್ ಸರ್ಕಲ್‌ನಲ್ಲಿ ಹೆರಿಗೆ ಸೇರಿದಂತೆ ವಿಶೇಷ ವಾರ್ಡ್ ವಿಭಾಗಗಳಿಗೆ ದಾಖಲಾದಲ್ಲಿ(ಸಿಂಗಲ್ ರೂಮ್ ಮತ್ತು ಟ್ವಿನ್ ಶೇರಿಂಗ್ ರೂಮ್ ) ರೂ.5,000 ದಿಂದ ರೂ. 10,000 ವರೆಗೆ ರಿಯಾಯಿತಿಯನ್ನು ಪಡೆಯಬಹುದು” ಎಂದು ಅವರು ಹೇಳಿದರು .

ಈ ಯೋಜನೆಗೆ ಸೇರಲು ಹೆಚ್ಚಿನ ವಯಸ್ಸಿನ ಮಿತಿಯಿಲ್ಲದ ಕಾರಣ, ಇದು ಹಿರಿಯ ನಾಗರಿಕರಿಗೆ ಕೈಗೆಟುಕುವಿಕೆಯೊಂದಿಗೆ ಗುಣಮಟ್ಟದ ಆರೋಗ್ಯವನ್ನು ಪಡೆಯಲು ಸಹಾಯ ಮಾಡಿದೆ ಎಂದು ಶ್ರೀ ಸಘೀರ್ ಸಿದ್ದಿಕಿ ಹೇಳಿದರು. ಕೆಎಂಸಿ ಆಸ್ಪತ್ರೆ ಅತ್ತಾವರ, ಕೆಎಂಸಿ ಆಸ್ಪತ್ರೆ ಅಂಬೇಡ್ಕರ್ (ಜ್ಯೋತಿ) ಸರ್ಕಲ್, ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ, ಕಟೀಲು ಮತ್ತು ನಮ್ಮ ಅಧಿಕೃತ ಏಜೆಂಟರನ್ನು ಸಂಪರ್ಕಿಸಿ ಮಣಿಪಾಲ್ ಆರೋಗ್ಯ ಕಾರ್ಡ್ ಸದಸ್ಯತ್ವಕ್ಕೆ ದಾಖಲಾಗಬಹುದು.

ಹೆಚ್ಚಿನ ಮಾಹಿತಿಗಾಗಿ 7022078002 / 0824-2445858 ಸಂಖ್ಯೆಗೆ ಕರೆ ಮಾಡಬಹುದು.


Spread the love