Spread the love
ಮತದಾರರು ನೀಡಿದ ತೀರ್ಪನ್ನು ಗೌರವಿಸುತ್ತೇವೆ – ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನಿರೀಕ್ಷಿತ ಸೋಲಾಗಿದ್ದು, ಮತದಾರರು ನೀಡಿದ ತೀರ್ಪನ್ನು ಗೌರವಿಸುತ್ತೇನೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ರವರು ಪ್ರತಿಕ್ರಿಯಿಸಿದ್ದಾರೆ.
ಮತದಾರರ ತೀರ್ಪೆ ಅಂತಿಮ. ನಮ್ಮ ಕಳೆದ ಸರಕಾರದ ಶಾಸಕರು ಮತ್ತು ಮಹಾನಗರ ಪಾಲಿಕೆಯ ಸದಸ್ಯರು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದ್ದು, 5 ಸಾವಿರ ಕೋಟಿಗೂ ಮೀರಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದ ತೃಪ್ತಿ ನಮ್ಮದು. ಸೋಲು-ಗೆಲುವು ಸಾಮಾನ್ಯ. ಮುಂದೆಯೂ ಗೆದ್ದ-ಸೋತ ಮಹಾನಗರ ಪಾಲಿಕೆ ಅಭ್ಯರ್ಥಿಗಳಿಂದ ಜನಪರ ಕೆಲಸ ಮುಂದುವರೆಯುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Spread the love