Home Mangalorean News Kannada News ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ ಮುಲೈ ಮುಗಿಲನ್

ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ ಮುಲೈ ಮುಗಿಲನ್

Spread the love

ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ ಮುಲೈ ಮುಗಿಲನ್

ಮಂಗಳೂರು:  ಈಗಾಗಲೇ ಏಪ್ರಿಲ್ 26 ರಂದು ಜರುಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ಜರುಗಲಿದ್ದು, ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಅವರು ವಿವರಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಅವರು ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಮತ ಎಣಿಕೆ ಪ್ರಕ್ರಿಯೆಗಳ ಕುರಿತು ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದರು.

ಜೂನ್ 4 ರಂದು ಬೆಳಿಗ್ಗೆ ಸ್ಟ್ರಾಂಗ್ ರೂಮ್ ತೆರೆಯುವು ದರಿಂದ ಹಿಡಿದು ಸಂಜೆ ಇವಿಎಂ ಮಷಿನ್‍ಗಳು ಭದ್ರತಾ ಕೊಠಡಿಗೆ ಇರಿಸುವವರೆಗಿನ ಎಲ್ಲಾ ಹಂತಗಳನ್ನು ಚುನಾವಣಾಧಿಕಾರಿ ಮುಲೈ ಮುಗಿಲನ್ ಅವರು ಸಭೆಯಲ್ಲಿ ವಿವರಿಸಿದರು.

ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಭಾರತ ಚುನಾವಣಾ ಆಯೋಗ ನೀಡಿದ್ದು, ಪ್ರತಿ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟ್ ,ಮತ ಎಣಿಕಾ ಏಜೆಂಟರಿಗೆ ಕಡ್ಡಾಯವಾಗಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಬೇಕೆಂದು ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಹೇಳಿದರು.

ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಎಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ನಿಗದಿತ ಸ್ಥಳ ಗುರುತಿಸಿ ಸಿದ್ದತೆ ಮಾಡಲಾಗಿದೆ. ಅಂದು ಮತ ಎಣಿಕಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ಅಡಿ. ನಿμÉಧಾಜ್ಞೆ ಜಾರಿಯಲ್ಲಿರುತ್ತದೆ. ಅನಗತ್ಯ ಓಡಾಟ ಮಾಡುವಂತಿಲ್ಲ ಎಂದು ಅವರು ಹೇಳಿದರು.

ಮತ ಎಣಿಕಾ ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರುವುದನ್ನು ನಿಬರ್ಂಧಿಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ಎಲ್ಲಾ ನಿಯಮಗಳನ್ನು ಪಾಲಿಸುವ ಮೂಲಕ ಮತ ಎಣಿಕೆ ಕಾರ್ಯ ನಿಯಮಾನುಸಾರ, ಸುಗಮವಾಗಿ ಜರುಗಲು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಅವರು ತಿಳಿಸಿದರು.

ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಪಕ್ಷೇತರ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಸಂತೋಷ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.


Spread the love

Exit mobile version