ಮತ ಚಲಾಯಿಸಿ ಮದುವೆಗೆ ತೆರಳಿದ ಮದುಮಗಳು

Spread the love

ಮತ ಚಲಾಯಿಸಿ ಮದುವೆಗೆ ತೆರಳಿದ ಮದುಮಗಳು

ಮಂಗಳೂರು: ರಾಜ್ಯಾದ್ಯಂತ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮದುವೆಗೂ ಮುನ್ನ ಮದುಮಗಳು ಮತದಾನ ಮಾಡಿದ ಪ್ರಸಂಗವೊಂದು ಮಂಗಳೂರಿನಲ್ಲಿ ನಡೆದಿದೆ.

 

ನಗರದ ಬೋಂದೆಲ್ ಸೇಂಟ್ ಲಾರೆನ್ಸ್ ಶಾಲೆಯಲ್ಲಿ ಮತದಾನ ನಡೆಯುತ್ತಿದೆ. ಪಚ್ಚನಾಡಿಯ ಮದುಮಗಳು ವಿಯೋಲಾ ಮಾರಿಯಾ ಫೆರ್ನಾಂಡೀಸ್ ಮತದಾನ ಮಾಡಿದ್ದಾರೆ.

7 ಗಂಟೆಗೆ ಮತದಾನ ಮಾಡಿ ಬಳಿಕ ಬೆಳ್ತಂಗಡಿಯಲ್ಲಿ ನಡೆಯೋ ಮದುವೆಗೆ ಮದುಮಗಳು ತೆರಳಿದ್ದಾರೆ. ಮಂಗಳೂರಿನ ಬೆಳ್ತಂಗಡಿಯ ವರ ಸಿಲ್ವೆಸ್ಟರ್ ರೋಡ್ರಿಗಸ್ ಜತೆ ಯುವತಿಯ ಮದುವೆ ಇಂದು ನಡೆಯುತ್ತಿದೆ.

ಒಟ್ಟಿನಲ್ಲಿ ವಿಯೋಲಾ ಅವರು ಮದುವೆಗೂ ಮುನ್ನ ಮತದಾನ ಮಾಡಿ ಮಾದರಿಯಾಗಿದ್ದಾರೆ.


Spread the love