Home Mangalorean News Kannada News ಮತ ಚಲಾಯಿಸುವ ಅರ್ಹ ಕಾರ್ಮಿಕರಿಗೆ ಒಂದು ದಿನದ ವೇತನ ಸಹಿತ ರಜೆ

ಮತ ಚಲಾಯಿಸುವ ಅರ್ಹ ಕಾರ್ಮಿಕರಿಗೆ ಒಂದು ದಿನದ ವೇತನ ಸಹಿತ ರಜೆ

Holiday
Spread the love

ಮತ ಚಲಾಯಿಸುವ ಅರ್ಹ ಕಾರ್ಮಿಕರಿಗೆ ಒಂದು ದಿನದ ವೇತನ ಸಹಿತ ರಜೆ

ಮಂಗಳೂರು : ರಾಜ್ಯ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 12 ರಂದು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ನಿಗಧಿಪಡಿಸಿರುತ್ತದೆ. ಸದರಿ ದಿನದಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೊಂದಾಯಿತರಾದ ಎಲ್ಲಾ ಕಾರ್ಮಿಕರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ.

ಆದುದರಿಂದ, ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳ ಮಾಲೀಕರು ತಮ್ಮ ಕಾರ್ಮಿಕರಿಗೆ ನವೆಂಬರ್ 12 ಮಂಗಳವಾರದಂದು ಒಂದು ದಿನದ ವೇತನ ಸಹಿತ ರಜೆಯನ್ನು ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಅನುವು ಮಾಡಿಕೊಡಲು ಸೂಚಿಸಲಾಗಿದ್ದು ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಧೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಅಧಿಕಾರಿ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.


Spread the love

Exit mobile version