ಮನಪಾ ಮೇಯರ್, ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ ಬಿಜೆಪಿ

Spread the love

ಮನಪಾ ಮೇಯರ್, ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ ಬಿಜೆಪಿ

ಮಂಗಳೂರು:  ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯರಾಗಿರುವ ಮನೋಜ್ ಹಾಗೂ ಉಪಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಮನಪಾ ಸದಸ್ಯರಾಗಿರುವ ಭಾನುಮತಿ ಪಿ.ಎಸ್. ಅವರನ್ನು ಭಾರತೀಯ ಜನತಾ ಪಾರ್ಟಿಯ ಕಡೆಯಿಂದ ಆಯ್ಕೆಮಾಡಲಾಗಿದೆ.

ಈ ಆಯ್ಕೆ ಪ್ರಕ್ರಿಯೆಯು ದ.ಕ. ಜಿಲ್ಲಾ ಕಛೇರಿಯಲ್ಲಿ ಪದಾಧಿಕಾರಿಗಳ ಸಮಿತಿ ಸಭೆಯಲ್ಲಿ ನಡೆಯಿತು ಎಂದು ಬಿಜೆಪಿ ಜಿಲ್ಲಾ ವಕ್ತಾರ ಅರುಣ್ ಶೆಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love
Subscribe
Notify of

0 Comments
Inline Feedbacks
View all comments