Home Mangalorean News Kannada News ಮನೆಯಲ್ಲಿ ಗಾಂಜಾ ದಾಸ್ತಾನು ಆರೋಪ- ಒರ್ವ ಬಂಧನ, 19.97 ಲಕ್ಷ ಮೌಲ್ಯದ ಗಾಂಜಾ ವಶ

ಮನೆಯಲ್ಲಿ ಗಾಂಜಾ ದಾಸ್ತಾನು ಆರೋಪ- ಒರ್ವ ಬಂಧನ, 19.97 ಲಕ್ಷ ಮೌಲ್ಯದ ಗಾಂಜಾ ವಶ

Spread the love
RedditLinkedinYoutubeEmailFacebook MessengerTelegramWhatsapp

ಮನೆಯಲ್ಲಿ ಗಾಂಜಾ ದಾಸ್ತಾನು ಆರೋಪ- ಒರ್ವ ಬಂಧನ, 19.97 ಲಕ್ಷ ಮೌಲ್ಯದ ಗಾಂಜಾ ವಶ

ಬಂಟ್ವಾಳ: ಮನೆಯೊಂದರಲ್ಲಿ ಗಾಂಜಾ ದಾಸ್ತಾನು ಮಾಡಿರುವ ಖಚಿತ ಮಾಹಿತಿಯ ಮೇರೆಗೆ ಮನೆ ಮೇಲೆ ದಾಳಿ ನಡೆಸಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ಪುರಸಭಾ ವ್ಯಾಪ್ತಿಯ ಪರ್ಲಿಯಾ ನಿವಾಸಿ ಅಹಮ್ಮದ್ ಸಾಬಿತ್ (30) ಎಂದು ಗುರುತಿಸಲಾಗಿದ್ದು ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ 39 ಕೆ.ಜಿ. 948 ಗ್ರಾಂ ತೂಕದ 19,97,400 ರೂ. ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

ಆರೋಪಿ ಅಹಮ್ಮದ್ ಸಾಬಿತ್ ಮತ್ತು ಇನ್ನೋರ್ವ ಗಾಂಜಾವನ್ನು ಪರ್ಲಿಯಾದ ಬಾಡಿಗೆ ಕೊಠಡಿಯಲ್ಲಿ ದಾಸ್ತಾನು ಇರಿಸಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ದಾಳಿ ನಡೆಸಿ ಸೊತ್ತುಗಳ ಸಹಿತ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


Spread the love

Exit mobile version