ಮಲ್ಪೆಯಲ್ಲಿ ಮಹಿಳೆಗೆ ಹಲ್ಲೆ ನಡೆಸಿರುವುದು ಖಂಡನೀಯ – ರವಿರಾಜ್ ರಾವ್

Spread the love

ಮಲ್ಪೆಯಲ್ಲಿ ಮಹಿಳೆಗೆ ಹಲ್ಲೆ ನಡೆಸಿರುವುದು ಖಂಡನೀಯ – ರವಿರಾಜ್ ರಾವ್

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವುದು ಖಂಡನೀಯವಾಗಿದ್ದು  , ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ  ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ರವಿರಾಜ್ ರಾವ್ ಆಗ್ರಹಿಸಿದ್ದಾರೆ.

ಕಾನೂನು ಯಾರಿಗೂ ಯಾವತ್ತೂ ಕೂಡ ಹಲ್ಲೆ ಮಾಡಲು ಅನುಮತಿ ನೀಡುವುದಿಲ್ಲ. ಹಲ್ಲೆ ನಡೆಸಿರು ವುದು ಖಂಡನಾರ್ಹ. ಸುಶಿಕ್ಷಿತರ ಜಿಲ್ಲೆ ಉಡುಪಿಯಲ್ಲಿ ಈ ಹಲ್ಲೆ ಪ್ರಕರಣ ನಡೆದಿದ್ದು, ಮಾನವೀಯತೆ ಮರೆತು ಮೃಗಗಳಂತೆ ಒರ್ವ ಮಹಿಳೆಯ ಮೇಲೆ ಹಲ್ಲೆ ಮಾಡಿರುವುದು ನಾಚಿಕೆಗೇಡು.  ಈ ಘಟನೆಯು ಅತ್ಯಂತ ಅಮಾನವೀಯ ವಾಗಿದ್ದು ಕಾನೂನನ್ನು ಕೈಗೆತ್ತಿಕೊ ಳ್ಳುವ ಹಕ್ಕು ಯಾರಿಗೂ ಇಲ್ಲ. ಹಾಗಾಗಿ ಸರಕಾರ ಕೂಡಲೇ ಇಂತಹ ಕೃತ್ಯದ ವಿರುದ್ಧ ಕ್ರಮ ಕೈಗೊಳ್ಳ ಬೇಕಾಗಿದೆ. ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳಬೇಕು. ಆ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಒತ್ತಾಯಿಸಿದ್ದಾರೆ.


Spread the love
Subscribe
Notify of


0 Comments
Inline Feedbacks
View all comments