ಮಲ್ಪೆಯಲ್ಲಿ ಮಹಿಳೆ ಮೇಲೆ ಹಲ್ಲೆ : ಸೂಕ್ತ ತನಿಖೆಗೆ ಪೋಲಿಸರಿಗೆ ಸಿದ್ದರಾಮಯ್ಯ ಸೂಚನೆ

Spread the love

ಮಲ್ಪೆಯಲ್ಲಿ ಮಹಿಳೆ ಮೇಲೆ ಹಲ್ಲೆ : ಸೂಕ್ತ ತನಿಖೆಗೆ ಪೋಲಿಸರಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮಲ್ಪೆಯಲ್ಲಿ ಮಹಿಳಯೋರ್ವರಿಗೆ ಮೀನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಅಮಾನುಷವಾಗಿ ಥಳಿಸಿದ ಪ್ರಕರಣದ ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಘಟನೆಯ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು.

ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ.

ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ,ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments