ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ
ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಮಹಿಳೆ ಮೀನು ಖಾಲಿ ಮಾಡುತ್ತಿರುವ ಸಮಯದಲ್ಲಿ ಮೀನು ಕದ್ದಿರುವುದಾಗಿ ಆರೋಪಿಸಲಾಗಿದೆ. ಬಳಿಕ ಆಕೆಯನ್ನು ಹಿಡಿದು ಮಹಿಳೆಯೊಬ್ಬರು ಕಪಾಳಕ್ಕೆ ಹೊಡೆಯುವ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದೆ. ಅಲ್ಲದೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಅವಾಚ್ಯ ಶಬ್ದಗಳಿಂದ ಬೈದು ಮತ್ತೆ ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ದಾಖಲಾಗಿದೆ.
ಘಟನೆ ಮೂರು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದ್ದು ಮಲ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.