ಮಲ್ಪೆ ಮಹಿಳೆಗೆ ಥಳಿತ ಪ್ರಕರಣ-ಮೂವರು ಆರೋಪಿಗಳ ಬಿಡುಗಡೆಗೆ ಹೈಕೋರ್ಟ್ ಆದೇಶ
ಉಡುಪಿ: ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಧಾನ ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಪ್ರಕರಣದ ಆರೋಪಿಗಳಾದ ಲಕ್ಷ್ಮಿ, ಶಿಲ್ಪಾ ಹಾಗೂ ಸುಂದರ್ ಅವರನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್ ಸೂಚಿಸಿದೆ.
ಆರೋಪಿಗಳ ಜಾಮೀನು ಅರ್ಜಿ ಹೈಕೋರ್ಟಿಗೆ ಗುರುವಾರ ಸಲ್ಲಿಕೆಯಾಗಿದ್ದು ನ್ಯಾ.ಹೇಮಂತ್ ಚಂದನ್ ಗೌಡರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ಆರೋಪಿಗಳನ್ನು ಬಂಧಿಸುವ ವೇಳೆ ಸೂಕ್ತ ಕಾರಣಗಳನ್ನು ನೀಡಿಲ್ಲ ಎಂಬ ನೆಲೆಯಲ್ಲಿ ಬಿಡುಗಡೆಗೆ ಕೋರ್ಟ್ ಸೂಚಿಸಿದ್ದು ಆರೋಪಿಗಳ ಪರವಾಗಿ ಹೈಕೋರ್ಟ್ ನ್ಯಾಯವಾದಿ ಊರ್ಮಿಳಾ ಪುಲ್ಲಾಟ್ ವಾದ ಮಂಡಿಸಿದ್ದರು.