Home Mangalorean News Kannada News ಮಲ್ಪೆ: ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ವೇಳೆ ಮೇಲಿನಿಂದ ಬಿದ್ದ ಪ್ರವಾಸಿಗ ಬಾಲಕ

ಮಲ್ಪೆ: ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ವೇಳೆ ಮೇಲಿನಿಂದ ಬಿದ್ದ ಪ್ರವಾಸಿಗ ಬಾಲಕ

Spread the love

ಮಲ್ಪೆ: ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ವೇಳೆ ಮೇಲಿನಿಂದ ಬಿದ್ದ ಪ್ರವಾಸಿಗ ಬಾಲಕ

ಉಡುಪಿ: ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ಮಾಡುತ್ತಿದ್ದ ಪ್ರವಾಸಿಗ ಬಾಲಕನೋರ್ವ ಮೇಲಿನಿಂದ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಶುಕ್ರವಾರ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ.

ಗಾಯಗೊಂಡ ಬಾಲಕನನ್ನು ಬೆಂಗಳೂರು ಮೂಲದ ಇಕ್ಷ್ಯಾನ್ ಚೌಧರಿ (12) ಎಂದು ಗುರುತಿಸಲಾಗಿದೆ. ಬಾಲಕ ಪ್ಯಾರಾ ಸೈಲಿಂಗ್ ಮಾಡುತ್ತಿದ್ದಾಗ 10 ಮೀಟರ್ ಎತ್ತರದಿಂದ ಬೋಟಿಗೆ ಬಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಸರಿಯಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಹಿನ್ನಲೆಯಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಬಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲ್ಪೆ ಬೀಚ್ ನಲ್ಲಿ ಕಳೆದ ತಿಂಗಳು ಪ್ರವಾಸಿಗರಿಗೆ ಅವಕಾಶ ನೀಡಲಾಗಿತ್ತು ಅಡ್ವೆಂಚರ್ ಚಟುವಟಿಕೆ, ದೋಣಿ ವಿಹಾರ ಆರಂಭವಾಗಿತ್ತು. ಆದರೆ ಈ ಕುರಿತು ಟೆಂಡರ್ ಪಡೆದಿರುವವರು ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿಲ್ಲ ಬೋಟಿಂಗ್ ವೇಳೆಯಲ್ಲಿ ದೋಣಿಯ ಸಾಮರ್ಥ್ಯಕ್ಕಿಂತ ಅಧಿಕ ಜನರನ್ನು ಹತ್ತಿಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ಇಂತಹ ಚಟುವಟಿಕೆಗಳು ನಡೆಯುತ್ತಿದ್ದು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಪ್ರವಾಸಿಗರ ರಕ್ಷಣೆಗೆ ಆದ್ಯತೆ ನೀಡದೇ ಇರುವ ಕುರಿತು ಮತ್ತು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ನಡೆದ ಮಲ್ಪೆ ಅಭಿವೃದ್ಧೀ ಸಮಿತಿಯ ಸಭೆಯಲ್ಲಿ ಶಾಸಕ ಯಶಪಾಲ್ ಸುವರ್ಣ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ಕೂಡ ನೀಡಿದ್ದರು.


Spread the love

Exit mobile version