Home Mangalorean News Kannada News ಮಳೆಯಿಂದ ಪ್ರಾಣ ಹಾನಿ, ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ – ಲಕ್ಷ್ಮೀ ಹೆಬ್ಬಾಳ್ಕರ್

ಮಳೆಯಿಂದ ಪ್ರಾಣ ಹಾನಿ, ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ – ಲಕ್ಷ್ಮೀ ಹೆಬ್ಬಾಳ್ಕರ್

Spread the love

ಮಳೆಯಿಂದ ಪ್ರಾಣ ಹಾನಿ, ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ – ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಮಳೆಯಿಂದ ಯಾವುದೇ ಪ್ರಾಣ ಹಾನಿ ಆಗಬಾರದು ಎಂದು ಮುನ್ನೆಚ್ಚರಿಕೆ ಕೈಗೊಂಡಿದ್ದು, 24 ಗಂಟೆಯೂ ಜಿಲ್ಲಾಡಳಿತ ಸರ್ಕಾರ ಎಚ್ಚರವಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅವರು ಭಾನುವಾರ ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿ ಹಾಗೂ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದರು. ನೆರೆ ಸಂದರ್ಭದಲ್ಲಿ ನಾನು ಭೇಟಿ ನೀಡಿಲ್ಲ ಎನ್ನುವವರ ಆರೋಪಗಳಿಗೆ ಉತ್ತರಿಸಿದ ಸಚಿವೆ ಇಂದು ಸಾಯಂಕಾಲದವರೆಗೂ ವಿವಿಧ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಇಲ್ಲೇ ಮನೆ ಮಾಡಿರಲು ತಯಾರಿದ್ದೇನೆ ನನಗೂ ಜವಾಬ್ದಾರಿ ಇದ್ದು ಅಧೀವೇಶನ ನಡಿತಾ ಇದೆ ಇಂದು ಭಾನುವಾರ ರಜೆ ಇದ್ದಾಗಲೂ ಬಂದಿದ್ದೇನೆ. ನನ್ನ ಅವಶ್ಯಕತೆ ಇದ್ದಾಗ ಇಲ್ಲಿಗೆ ಬರುತ್ತೇನೆ ಎಂದರು.

ಯಾವುದೇ ತೊಂದರೆ ಆಗಬಾರದು ಎಂದು ಈಗಾಗಲೇ ಹಲವು ಕ್ರಮ ಕೈಗೊಂಡಿದ್ದು, 25 ದಿನಗಳ ಹಿಂದೆ ಜಿಲ್ಲಾ ಮಟ್ಟದ ಸಭೆ ನಡೆಸಿದ್ದೇವೆ. ಅರಣ್ಯ ಇಲಾಖೆಗೆ ಸೂಚನೆ ಕೊಟ್ಟಿದ್ದು, ಈಗಾಗಲೇ 500 ರಿಂದ 600 ಮರಗಳನ್ನು ತೆರವು ಮಾಡಲಾಗಿದೆ. ಮೆಸ್ಕಾಂನವರು ಶಾಲೆಯ ಪಕ್ಕ ಇರುವ ವಯರ್ ಗಳನ್ನು ತೆರವು ಮಾಡಲು ಸೂಚನೆ ಕೊಟ್ಟಿದ್ದೇನೆ ಅದಕ್ಕಾಗಿ ಅವರು ಕೂಡ ಅಪಾಯ ಇರುವಲ್ಲಿ ತೆರವು ಮಾಡಿದ್ದಾರೆ. ನಗರದಲ್ಲಿ ಚರಂಡಿಯಿಂದ ಸಮಸ್ಯೆ ಆಗಿತ್ತು, ಸ್ವಚ್ಛಗೊಳಿಸಿದ್ದಾರೆ ಕಾಲು ಸಂಕಗಳ ಸಮಸ್ಯೆ ಆಗದಂತೆ ನೋಡಿಕೊಂಡಿದ್ದೇವೆ ಅಲ್ಲದೆ ಜಿಲ್ಲಾಡಳಿತದಿಂದ ಹೆಲ್ಪ್ ಲೈನ್ ಇಟ್ಟಿದ್ದೇವೆ ಎಂದರು.

ಕಡಲು ಕೊರೆತಕ್ಕೆ 5 ಕೋಟಿ ರೂಪಾಯಿ ಬಿಡುಗಡೆ ಆಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವೆ ಹಳೆಬಾಕಿ ಪಾವತಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ತಕ್ಷಣ 5 ಕೋಟಿ ರೂಪಾಯಿ ಬಿಡುಗಡೆಗೆ ಮನವಿ ಮಾಡಿದ್ದೇವೆ ಆದಷ್ಟು ಬೇಗ 5 ಕೋಟಿ ರೂಪಾಯಿ ಬೇಗ ಬರುತ್ತದೆ ಎಂದರು.

ರಾಜ್ಯದಲ್ಲಿ ಪರಿಹಾರ ತಾರತಮ್ಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವೆ ಹಿಂದಿನ ಸರ್ಕಾರ 5 ಲಕ್ಷ ರೂ ಈಗ 1.20 ರೂ ಪರಿಹಾರ ನೀಡುವ ವಿಚಾರದಲ್ಲಿ ಗೊಂದಲ ಇದೆ. ಕಳೆದ ಬಾರಿ ಮಳೆಯಾದಾಗ ಮನೆ ಬಿದ್ದರೆ 5 ಲಕ್ಷ ಕೊಟ್ಟಿದ್ದೇವೆ. ಸರ್ಕಾರ ಬಂದ ಮೊದಲ ವರ್ಷದಲ್ಲಿ 5 ಲಕ್ಷ ಕೊಟ್ಟಿದ್ದೇವೆ ಆದರೆ ಈ ಬಾರಿ ಇನ್ನು ನನಗೆ ಸ್ಪಷ್ಟತೆ ಸಿಕ್ಕಿಲ್ಲ ಆದ್ದರಿಂದ ನಾನು ಈ ವಿಚಾರಲದ್ಲಿ ಗೊಂದಲ ಸೃಷ್ಟಿ ಮಾಡುವುದಿಲ್ಲ. ಆದಷ್ಟು ಬೇಗ ಸರ್ಕಾರಿ ಮಟ್ಟದಲ್ಲಿ ತಿಳಿದುಕೊಂಡು ಹೇಳುತ್ತೇನೆ ಎಂದ ಹೆಬ್ಬಾಳ್ಕರ್ ಬಿಜೆಪಿ ಅವರಿಗೆ ಉತ್ತರ ಕೊಡಲು ನಾವು ಸಮರ್ಥರು ಇದ್ದೇವೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮರ್ಥರಿದ್ದು, ಬಿಜೆಪಿಯವರು ಹತಾಶರಾಗಿದ್ದಾರೆ ಹಾಗಾಗಿ ಏನೇನು ಹೇಳುತ್ತಾರೆ ಎಂದರು.

ಸಿದ್ದರಾಮಯ್ಯ ಅವರಿಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ ವಿಚಾರದಲ್ಲಿ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್ ಈ ಬಗ್ಗೆ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯಿರಿ. ಮುಖ್ಯಮಂತ್ರಿಗಳು ಶ್ರೀನಿವಾಸ ಪೂಜಾರಿ ಹೆಸರು ಹೇಳಿದ್ದಾರೆ ರಾಜಕಾರಣಕ್ಕಾಗಿ ಹೇಳಿಕೆ ಕೊಡುವ ಜಾಯಮಾನದವರು ಸಿದ್ದರಾಮಯ್ಯ ಅಲ್ಲ ಜವಾಬ್ದಾರಿ ಸ್ಥಾನದಲ್ಲಿದ್ದಾರೆ 15 ಬಾರಿ ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ ಸುಮ್ಮನೆ ರಾಜಕೀಯಕ್ಕಾಗಿ ಆರೋಪ ಮಾಡುವವರಲ್ಲ ಪಕ್ಕಾ ಸಬೂತಿದ್ದರೆ ಮಾತ್ರ ಆರೋಪ ಮಾಡುತ್ತಾರೆ ಆದ್ದರಿಂದ ಕೋಟ ಪತ್ರಕ್ಕೆ ಸಿದ್ದರಾಮಯ್ಯನವರು ತಕ್ಕ ಉತ್ತರ ಕೊಡುತ್ತಾರೆ ಎಂದರು.

ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

Exit mobile version