ಮಸಾಜ್ ಪಾರ್ಲರ್ ಗೆ ದಾಳಿ : ಮಹಿಳಾ ಪಿಂಪ್ ಸೆರೆ
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯಿರುವ M/s Lotus Salon & wellness ಎಂಬ ಹೆಸರಿನ ಮಸಾಜ್ ಸೆಂಟರ್ ಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಕಾವೂರು ಪೊಲೀಸ್ ಠಾಣೆಯ ಪೊಲೀಸರು ಧಾಳಿ ಮಾಡಿ ಮಹಿಳಾ ಪಿಂಪ್ ಓರ್ವಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿರುತ್ತಾರೆ
ಮಂಗಳೂರು ನಗರದ ಕೊಟ್ಟಾರ ಚೌಕಿ ಬಳಿಯಿರುವ ರಾಮಾನುಗ್ರಹ ಕಟ್ಟಡದಲ್ಲಿರುವ M/s Lotus Salon & wellness ಎಂಬ ಮಸಾಜ್ ಸೆಂಟರ್ ನಲ್ಲಿ ಯುವತಿಯನ್ನು ಹಾಗೂ ಮಹಿಳೆಯರನ್ನು ಇಟ್ಟುಕೊಂಡು ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಕಾವೂರು ಪೊಲೀಸರು ಮಸಾಜ್ ಪಾರ್ಲರ್ ಗೆ ದಾಳಿ ನಡೆಸಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದ ಮಹಿಳಾ ಪಿಂಪ್ ಒಬ್ಬಾಕೆಯನ್ನು ವಶಕ್ಕೆ ಪಡೆದುಕೊಂಡು, ನಗದು ಹಣ ರೂ. 14,700/- ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಎಂಬ ಹೆಸರಿನಲ್ಲಿ ಯುವತಿಯರನ್ನು ಗಿರಾಕಿಗಳಿಗೆ ಒದಗಿಸಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದರು. ಈ ಮಸಾಜ್ ಸೆಂಟರ್ ನಲ್ಲಿದ್ದ 5 ನೊಂದ ಯುವತಿಯರನ್ನು ರಕ್ಷಿಸಲಾಗಿದೆ. ಈ ಮಸಾಜ್ ಸೆಂಟರ್ ನ್ನು ನಡೆಸುತ್ತಿದ್ದ ರಾಜೇಶ್, ಸತೀಶ್ ಮತ್ತು ಜಯರಾಜ್ ಎಂಬವರು ತಲೆಮರೆಸಿಕೊಂಡಿರುತ್ತಾರೆ.
ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತರಾಮ, ಕಾವೂರು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕೆ. ಆರ್ ನಾಯ್ಕ್ ಹಾಗೂ ಸಿಸಿಬಿ ಘಟಕದ ಪಿಎಸ್ಐ ಶ್ಯಾಮ್ ಸುಂದರ್, ಹೆಚ್.ಡಿ.ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಮತ್ತು ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.