ಸೆಲೂನ್ ಮೇಲೆ ದಾಳಿ ನಡೆಸಿದವರನ್ನು ಕೂಡಲೇ ಬಂಧಿಸುತ್ತೇವೆ- ಡಾ. ಜಿ ಪರಮೇಶ್ವರ್

Spread the love

ಸೆಲೂನ್ ಮೇಲೆ ದಾಳಿ ನಡೆಸಿದವರನ್ನು ಕೂಡಲೇ ಬಂಧಿಸುತ್ತೇವೆ- ಡಾ. ಜಿ ಪರಮೇಶ್ವರ್

ಉಡುಪಿ: ಮಂಗಳೂರಿನಲ್ಲಿ ಸೆಲೂನ್ ಮೇಳೆ ದಾಳಿ ಮಾಡಿದವರನ್ನು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ಅವರು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಯಾವ ಉದ್ದೇಶಕ್ಕೆ ದಾಳಿಯಾಗಿದೆ ಗೊತ್ತಿಲ್ಲ ಆದರೆದಾಳಿ ಮಾಡಿದವರನ್ನು ತಕ್ಷಣ ಬಂಧಿಸಲು ಸೂಚಿಸಿದ್ದೇನೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಪೋಲಿಸರಿಗೆ ಸೂಚನೆ ಕೊಟ್ಟಿದ್ದೇನೆ. ಇಂತಹ ಕೃತ್ಯಗಳು ನಡೆಯಬಾರದು ಮತ್ತು ಯಾರಿಗೂ ವ್ಯಾಪಾರ ಮಾಡಿಕೊಳ್ಳುವುದಕ್ಕೆ ಅಡ್ಡಿಪಡಿಸಬಾರದು ಎಂದರು.

ಪ್ರತಿಯೊಬ್ಬರಿಗೂ ಕೆಲಸ ಮಾಡಿಕೊಳ್ಳುವ ಹಕ್ಕಿದ್ದು ಯಾರು ಕೂಡ ಕಾನೂನು ಕೈಗೆ ಎತ್ತಿಕೊಳ್ಳಬಾರದು. ದಾಳಿ ಮಾಡಿದವರು ಯಾರು ಎಂದು ಗುರುತಿಸುತ್ತೇವೆ ,ತ್ತಿ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಇಲಾಖೆ ತೆಗೆದುಕೊಳ್ಳಲಿದೆ ಎಂದರು

ಅನೈತಿಕ ಕಾರ್ಯಾಚರಿಸುವ ಪಾರ್ಲರ್ಗಳಿದ್ದರೆ ದೂರು ಕೊಡಿ ಅದನ್ನು ಬಿಟ್ಟು ನಾವೇ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ದೂರು ಕೊಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಉದ್ಯಮ ಮಾಡುವವರಿಗೆ ಕಾರ್ಪೊರೇಷನ್ ಅವರು ಟ್ರೇಡ್ ಲೈಸೆನ್ಸ್ ಕೊಟ್ಟಿರುತ್ತಾರೆ. ಯಾವ ಕಂಡೀಶನ್ ಹಾಕಿ ಕೊಟ್ಟಿರುತ್ತಾರೆ ಅದನ್ನು ಪಾಲಿಸದಿದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ. ನಿಯಮಾವಳಿಗಳನ್ನು ಮೀರಿ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ದಾಳಿ ಕೋರರನ್ನು ತಕ್ಷಣ ಅರೆಸ್ಟ್ ಮಾಡಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ


Spread the love
Subscribe
Notify of

0 Comments
Inline Feedbacks
View all comments