ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಸಾವು – ರಮೇಶ್ ಕಾಂಚನ್ ಕಂಬನಿ

Spread the love

ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಸಾವು – ರಮೇಶ್ ಕಾಂಚನ್ ಕಂಬನಿ

ಉಡುಪಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದವರು ಸೇರಿದಂತೆ ಹಲವಾರು ಮಂದಿ ಸಾವನಪ್ಪಿರುವುದು ನೋವಿನ ಸಂಗತಿಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಕಂಬನಿ ಮಿಡಿದಿದ್ದಾರೆ.

ಕಾಲ್ತುಳಿತದ ದುರಂತದಲ್ಲಿ ನಮ್ಮ ಕರ್ನಾಟಕದ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ಬಹಳ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಮಹಾ ಕುಂಭಮೇಳದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕನ್ನಡಿಗರ ನೆರವಿಗೆ ಕರ್ನಾಟಕ ರಾಜ್ಯ ಸರ್ಕಾರವು ಸಹಾಯವಾಣಿ ತೆರೆದಿದ್ದು ಸಹಾಯವಾಣಿ ಸಂಖ್ಯೆ 080-22340676 ಕರೆ ಮಾಡಿ ಸಹಾಯ ಪಡೆಯಬಹುದು ಹಾಗೂ ಕಾಲ್ತುಳಿತದಲ್ಲಿ ಗಾಯಗೊಂಡಿರುವ ರಾಜ್ಯದ ಎಲ್ಲಾ ಜನರು ಕ್ಷೇಮವಾಗಿ ರಾಜ್ಯಕ್ಕೆ ಮರಳಿ ಬರಲಿ ಎಂದು ಪ್ರಾರ್ಥಿಸುವುದಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments