Home Mangalorean News Kannada News ಮಹಿಳಾ ಮೀನುಗಾರರ ಸಾಲ ಮನ್ನಾ – ಸೆ. 26ರಂದು ಮೀನುಗಾರಿಕಾ ಸಚಿವರ ನೇತೃತ್ವದಲ್ಲಿ ಸಭೆ

ಮಹಿಳಾ ಮೀನುಗಾರರ ಸಾಲ ಮನ್ನಾ – ಸೆ. 26ರಂದು ಮೀನುಗಾರಿಕಾ ಸಚಿವರ ನೇತೃತ್ವದಲ್ಲಿ ಸಭೆ

Spread the love

ಮಹಿಳಾ ಮೀನುಗಾರರ ಸಾಲ ಮನ್ನಾ – ಸೆ. 26ರಂದು ಮೀನುಗಾರಿಕಾ ಸಚಿವರ ನೇತೃತ್ವದಲ್ಲಿ ಸಭೆ

ಉಡುಪಿ : ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ  ಬಿ ಎಸ್. ಯಡಿಯೂರಪ್ಪರವರು ಈಗಾಗಲೇ ಘೋಷಿಸಿರುವ ಮಹಿಳಾ ಮೀನುಗಾರರ ಸಾಲ ಮನ್ನಾ ಯೋಜನೆಯ ಬಗ್ಗೆ ವಿಸ್ತøತವಾಗಿ ಚರ್ಚಿಸಲು ರಾಜ್ಯ ಸರ್ಕಾರದ ಮೀನುಗಾರಿಕೆ ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿದೆ.

ಸೆಪ್ಟೆಂಬರ್ 26ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ರಜತಾದ್ರಿ ಮಣಿಪಾಲದಲ್ಲಿ ಆಯೋಜಿಸಿರುವ ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ಲೀಡ್ ಬ್ಯಾಂಕಿನ ಪ್ರಬಂಧಕರು ಭಾಗವಹಿಸಲಿದ್ದು ಸಾಲ ಮನ್ನಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಾಗೂ ಯೋಜನೆಯ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಜಿಲ್ಲೆಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಈ ಸಭೆಯಲ್ಲಿ ಭಾಗವಹಿಸಿ, ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ  ಯಶ್‍ಪಾಲ್ ಸುವರ್ಣ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version