ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

Spread the love

ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರಂದು ಬುಧವಾರ ಸಂಜೆ 4 ಗಂಟೆಯ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

1946ರ ಜನವರಿ 15ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದ ಕೆ.ವಸಂತ ಬಂಗೇರ, ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ನಾಳೆ (ಮೇ 09) ಬೆಳಗ್ಗೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ಸಾಧ್ಯತೆ ಇದ್ದು, ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ ಎಂದು ತಿಳಿದುಬಂದಿದೆ.

1946ರ ಜ.15ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದ ಕೆ.ವಸಂತ ಬಂಗೇರ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ನಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1983, 1985ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಕೆ.ವಸಂತ ಬಂಗೇರ ಗೆಲುವು ಸಾಧಿಸಿದ್ದರು. 2008ರ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು. 2013ರಲ್ಲೂ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.


Spread the love