Home Mangalorean News Kannada News ಮಾಡದ ತಪ್ಪಿಗೆ ಜೈಲು ಕರಾವಳಿ ಮೂಲದ ಅಬೂಬಕ್ಕರಿಗೆ ಬಿಡುಗಡೆ ಭಾಗ್ಯ ಕಲ್ಪಿಸಿದ ಇಂಡಿಯನ್ ಸೋಶಿಯಲ್ ಪೋರಂ

ಮಾಡದ ತಪ್ಪಿಗೆ ಜೈಲು ಕರಾವಳಿ ಮೂಲದ ಅಬೂಬಕ್ಕರಿಗೆ ಬಿಡುಗಡೆ ಭಾಗ್ಯ ಕಲ್ಪಿಸಿದ ಇಂಡಿಯನ್ ಸೋಶಿಯಲ್ ಪೋರಂ

Spread the love

ಮಾಡದ ತಪ್ಪಿಗೆ ಜೈಲು ಕರಾವಳಿ ಮೂಲದ ಅಬೂಬಕ್ಕರಿಗೆ ಬಿಡುಗಡೆ ಭಾಗ್ಯ ಕಲ್ಪಿಸಿದ ಇಂಡಿಯನ್ ಸೋಶಿಯಲ್ ಪೋರಂ

ಸೌದಿಅರೇಬಿಯಾ: ಕರಾವಳಿಯ ಪುತ್ತೂರು ಮೂಲದ ಅಬೂಬಕ್ಕರ್‍ರವರು ಸೌದಿಅರೇಬಿಯಾದ ರಿಯಾದಿನಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಎಂದಿನಂತೆ ತಮ್ಮ ಕೆಲಸ ನಿರ್ವಹಿಸುತ್ತಿದ್ದ ಸಂಧರ್ಭದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರು ಕಾರನ್ನು ನಿಲ್ಲಿಸಿ ರಿಯಾದಿನಲ್ಲಿರುವ ಶ್ರೀಲಂಕಾ ರಾಯಭಾರಿ ಕಚೇರಿಗೆ ಬಾಡಿಗೆಗೊತ್ತು ಮಾಡಿ ಪ್ರಯಾಣ ಬೆಳೆಸಿದ್ದಾರೆ. ಅದರಂತೆ ಆ ಮಹಿಳಾ ಪ್ರಯಾಣಿಕರನ್ನು ಶ್ರೀಲಂಕನ್ ರಾಯಭಾರಿ ಕಛೇರಿಯಲ್ಲಿ ಇಳಿಸಿ ತನ್ನ ಬಾಡಿಗೆ ಹಣವನ್ನು ಕೇಳಿದಾಗ ಆ ಪ್ರಯಾಣಿಕರು ನಾವು ಕೆಲವೇ ಕ್ಷಣದಲ್ಲಿ ಹಿಂದಿರುಗಲಿದ್ದೇವೆ, ಆದ್ದರಿಂದ ನಿಮ್ಮ ಮೊಬೈಲ್ ನಂಬರ್ ನೀಡಿ ಎಂದು ಕೇಳಿದಾಗ ಅಬೂಬಕ್ಕರ್‍ರವರು ತನ್ನ ನಂಬರನ್ನು ಕೊಟ್ಟು ಪ್ರಯಾಣಿಕರಿಗಾಗಿ ಕಾಯುತ್ತಿದ್ದರು.

ನಂತರ ಕೆಲವು ಗಂಟೆಯ ನಂತರ ಪೋನ್ ಮಾಡಿ ಇಬ್ಬರಲ್ಲಿ ಒಂದು ಮಹಿಳೆ ತನ್ನನು ಮನೆಗೆ ಬಿಡಲು ಹೇಳಿದ್ದಾಳೆ. ಅದೇರೀತಿ ಶ್ರೀಲಂಕನ್ ಪ್ರಜೆಯಾದ ಅವಳನ್ನು ಕರೆದುಕೊಂಡು ಹೋಗುವಾಗ ರಸ್ತೆ ಮಧ್ಯದಲ್ಲಿ ಪೋಲೀಸ್ ತಪಾಸಣೆ ನಡೆಯುತ್ತಿತ್ತು. ಪೋಲೀಸರು ಇವರ ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿದ್ದ ಶ್ರೀಲಂಕನ್ ಮಹಿಳೆಯ ಬಳಿ ಯಾವುದೇ ಇಕಾಮ (ವಾಸ್ತವ್ಯ ಪರವಾನಿಗೆ) ಇರಲಿಲ್ಲ. ಇದರಿಂದ ಸಂಶಯಗೊಂಡ ಪೋಲೀಸರು ಅನೈತಿಕ ಸಂಬಂಧ ಸಂಶಯದ ಮೇಲೆ ಇಬ್ಬರನ್ನು ಬಂಧಿಸಿದ್ದರು

ಅಲ್ಲಿಂದ ಪೋಲೀಸ್ ಠಾಣೆಗೆ ಕರೆದೊಯ್ದ ಪೋಲೀಸರು ಅಬೂಬಕ್ಕರ್‍ರವರನ್ನು ಬಂಗ್ಲಾ ದೇಶದವರೆಂದು ಎಫ್‍ಐಆರ್ ದಾಖಲಿಸಿ ಮತ್ತು ಹೆಣ್ಣು ಮಕ್ಕಳ ಕಳ್ಳ ಸಾಗಾಣೆಯ ಸುಳ್ಳು ಮೊಕದ್ದಮೆ ದಾಖಲಿಸಿ ಜೈಲಿಗೆ ಹಾಕಲಾಯಿತು.

ಇನ್ನು ಭಾರತದಲ್ಲಿ ಅಬೂಬಕ್ಕರ್‍ರವರ ಮನೆಯವರು ಇವರ ಬಿಡುಗಡೆಗಾಗಿ ಸ್ಥಳೀಯ ಸಚಿವರು ಮತ್ತು ಶಾಸಕರನ್ನು ಸಂಪರ್ಕಿಸಿದರು ಯಾವುದೇ ಪ್ರಯೋಜನವಾಗಲಿಲ್ಲ .

ಈ ವಿಷಯವನ್ನು ಅರಿತ ಸೋಶಿಯಲ್ ಪಾರಂನ ಉಸ್ಮಾನ್ ಕುಂಜತ್ತೂರು, ಶರೀಫ್ ಕಬಕ, ಸಿರಾಜ್ ಸಜಿಪ ಮತ್ತು ಅಬ್ದುಲ್ ಸಾಬಿತ್ ಬಜ್ಪೆ ನೇತೃತ್ವದ ತಂಡವನ್ನು ರಚಿಸಿ ಜೈಲಿಗೆ ಹೋಗಿ ಅವರನ್ನು ಸಂಪರ್ಕಿಸಿ ಅವರಿಂದ ನೈಜ ಘಟನೆ ತಿಳಿದು ಅವರಗೆ ಆತ್ಮ ಸ್ಥೈರ್ಯ ನೀಡಲಾಯಿತು. ಹಾಗೇ ಅಬೂಬಕ್ಕರ್ ಕಂಪನಿಯ ಮಾಲೀಕರನ್ನು ಸಂಪರ್ಕಿಸಿದಾಗ ಮೊದಲಿಗೆ ಉತ್ತಮ ಪ್ರತಿಕ್ರಿಯೆ ನೀಡಿದ ಅವರು ನಂತರ ಅವರು ಸಹ ಇದನ್ನು ನಿರ್ಲಕ್ಷಿಸಲು ಪ್ರಾರಂಭಿಸಿದರು,

ಇತ್ತ ಅಬೂಬಕ್ಕರ್‍ರವರ ಪಾಸ್‍ಪೋರ್ಟ್ ಪೋಲೀಸರು ಎಲ್ಲೋ ಕಳೆದುಕೊಂಡಿದ್ದರು, ಮೊತ್ತೊಂದೆಡೆ ಇಕಾಮದ ಅವಧಿಯೂ ಮುಗಿದು ಅಬೂಬಕ್ಕರ್‍ರವರಿಗೆ ಜೈಲೇ ಗತಿ ಎಂಬ ಪರಿಸ್ಥಿತಿ ಉಂಟಾಗಿತ್ತು. ಇಂತಹ ಸಂಧಿಗ್ದ ಪರಿಸ್ಥತಿಯಲ್ಲೂ ಹಿಂಜರಿಯದ ಇಂಡಿಯನ್ ಸೋಶಿಯಲ್ ಪಾರಂನ ತಂಡವು ಇವರಿಗೆ ನ್ಯಾಯ ದೊರೆಕಲು ನಿರಂತರ ಒಂದು ವರ್ಷ ದಿಂದ ಕಾನೂನು ರೀತಿಯ ಹೋರಾಟ ನಡೆಸುತ್ತ ಬಂದಿತ್ತು. ಕೊನೆಗೂ ಈ ಕಾನೂನು ಹೋರಾಟದಲ್ಲಿ ಜಯಿಸಿದ ಇಂಡಿಯನ್ ಸೋಶಿಯಲ್ ಫಾರಾಮಿನ ತಂಡವು ಅನ್ಯಾಯವಾಗಿ ಸೆರೆಮನೆ ಸೇರಿದ್ದ ಅಬೂಬಕ್ಕರ್‍ರವರನ್ನು ಬಿಡುಗಡೆಗೊಳಿಸಿ ಅದೇ ದಿನ ಸ್ವದೇಶಕ್ಕೆ ಕಳಿಹಿಸಲು ಯಶಸ್ವಿಯಾಗಿದೆ.


Spread the love

Exit mobile version