ಮಾಧ್ಯಮ ಕಾರ್ಯಗಾರ : ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು : ಪತ್ರಕರ್ತರು ತಮ್ಮ ಪ್ರಾಥಮಿಕ ಹೊಣೆಗಾರಿಕೆಯನ್ನು ತಿಳಿದುಕೊಂಡು ಕರ್ತವ್ಯವನ್ನು ಮಾಡಬೇಕು ಎಂದು ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲಾರಾದ ಡಾ.ಉದಯ ಕುಮಾರ್ ಇರ್ವತ್ತೂರು ಹೇಳಿದರು.
ಅವರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ನಡೆಯಲಿರುವ ಮಾಧ್ಯಮ ಕಾರ್ಯಾಗಾರದ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಜ. 2 ರಂದು ಬಿಡುಗಡೆಗೊಳಿಸಿ ಮಾತನಾಡಿದರು.
“ಸಂವಿದಾನದತ್ತ ಹಕ್ಕುಗಳ ರಕ್ಷಣೆಯಲ್ಲಿ ಮಾಧ್ಯಮ ಪಾತ್ರ“, “ಅಭಿವೃದ್ಧಿ ಪತ್ರಿಕೋದ್ಯಮ ಎದುರಿಸುತ್ತಿರುವ ಸವಾಲುಗಳು” ಹಾಗೂ “ಮಾಧ್ಯಮ ರಂಗ, ಆಕರ್ಷಣೆ ಭ್ರಮೆ ಮತ್ತು ಉದ್ಯೋಗವಕಾಶ” ಎಂಬ ವಿವಿಧ ವಿಚಾರಗಳ ಬಗ್ಗೆ ವಿಚಾರಗೋಷ್ಠಿಯನ್ನೊಳಗೊಂಡ ಮಾಧ್ಯಮ ಕಾರ್ಯಗಾರವು ಜ.16ರಂದು ಮಂಗಳೂರು ವಿಶ್ವವಿದ್ಯಾನಿಲಯದ “ರವೀಂದ್ರ ಕಲಾ ಭವನ”ದಲ್ಲಿ ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮವನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಬಂಟ್ವಾಳ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ| ಗಣಪತಿ ಗೌಡ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್. ಪೆರ್ಲ, ಕೋಶಾಧಿಕಾರಿ ಜ್ಯೋತಿಪ್ರಕಾಶ್ ಪುಣಚ, ಉಪಾಧ್ಯಕ್ಷರಾದ ತಾರನಾಥ್ ಗಟ್ಟಿ ಕಾಪಿಕಾಡು, ಕಾರ್ಯದರ್ಶಿಗಳಾದ ಈಶ್ವರ್ ವಾರಣಾಶಿ, ಗೋಪಾಲ್ ಅಂಚನ್, ಉಪನ್ಯಾಸಕರಾದ ಗುರುಪ್ರಸಾಧ್, ಹಮೀದ್ ವಿಟ್ಲ ಭಾಗವಹಿಸಿ, ಸಹಕರಿಸಿದರು.