Home Mangalorean News Kannada News ಮಾರಣಾಂತಿಕ ಹಲ್ಲೆಗೊಳಗಾದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮೃತ್ಯು

ಮಾರಣಾಂತಿಕ ಹಲ್ಲೆಗೊಳಗಾದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮೃತ್ಯು

Spread the love

ಮಾರಣಾಂತಿಕ ಹಲ್ಲೆಗೊಳಗಾದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮೃತ್ಯು

ಮಂಗಳೂರು: ಬಿ.ಸಿ. ರೋಡಿನಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ನಗರದ ಆಸ್ಪತ್ರೆಗೆ ದಾಖಲಾದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಜುಲೈ 4 ರಂದು ಬಿ.ಸಿ.ರೋಡಿನ ತನ್ನ ತಂದೆಯ ಲಾಂಡ್ರಿಯಲ್ಲಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ತಂಡವೊಂದು ಅಂಗಡಿಗೆ ನುಗ್ಗಿ ಶರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶರತ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶರತ್ ಅವರು ಶುಕ್ರವಾರ ಸಂಜೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೃತ ಶರತ್ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮ ಜುಲೈ 8 ರಂದು ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.

ಜುಲೈ 7 ರಂದು ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಶರತ್ ಕೊಲೆ ಯತ್ನದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬಿಸಿ ರೋಡ್ ಚಲೊ ಹಮ್ಮಿಕೊಂಡಿದ್ದು ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕರಾದ ಸುನಿಲ್ ಕುಮಾರ್ ಹಾಗೂ ಇತರ ನಾಯಕರನ್ನು ಪ್ರತಿಭಟನೆಯ ಹಾದಿಯಲ್ಲೇ ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದರು.


Spread the love

Exit mobile version