ಮಾರ್ಚ್ 1: ಉಡುಪಿ ಎಸ್ಪಿ ನಿಶಾ ಜೇಮ್ಸ್ ಅವರಿಂದ ಸಾರ್ವಜನಿಕರೊಂದಿಗೆ ನೇರ ಫೋನ್-ಇನ್

Spread the love

ಮಾರ್ಚ್ 1: ಉಡುಪಿ ಎಸ್ಪಿ ನಿಶಾ ಜೇಮ್ಸ್ ಅವರಿಂದ ಸಾರ್ವಜನಿಕರೊಂದಿಗೆ ನೇರ ಫೋನ್-ಇನ್

ಉಡುಪಿ: ನೂತನವಾಗಿ ಅಧಿಕಾರ ಸ್ವೀಕರಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಅವರು ಶುಕ್ರವಾರ ಮಾರ್ಚ್ 1 ರಂದು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ 11 ರ ವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ನಡೆಸಲಿದ್ದಾರೆ.

ಸಾರ್ವಜನಿಕರು ನೇರ ಫೋನ್ ಇನ್ ಕಾರ್ಯಕ್ರಮಕ್ಕೆ ಕರೆ ಮಾಡಿ ತಮ್ ಅಹವಾಲುಗಳನ್ನು ತಿಳಿಸಬಹುದು ಅಥವಾ ವಾಸಿಸುವ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳೇನಾದರೂ ನಡೆಯುತ್ತಿದ್ದಲ್ಲಿ ಮಾಹಿತ ಅಥವಾ ತಮ್ಮ ಹಿಂದಿನ ಅರ್ಜಿ ಪ್ರಕರಣಗಳ ಕುರಿತಾಗಿ ಮಾಹಿತಿ ಅಥವಾ ಪೊಲೀಸ್ ಇಲಾಖಾ ಕರ್ತವ್ಯಕ್ಕೆ ಸಂಬಂಧಪಟ್ಟಂತೆ ಸಲಹೆಗಳು ಹಾಗೂ ಪೊಲೀಸ್ ಇಲಾಖಾ ಕರ್ತವ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಬಹುದಾಗಿರುತ್ತದೆ.

ಸಾರ್ವಜನಿಕರು ಸ್ಥಿರ ದೂರವಾಣಿ ಸಂಖ್ಯೆ 0820-2531777 ಗೆ ಕರೆ ಮಾಡಬಹುದಾಗಿದ್ದು, ನೇರ ಫೋನ್-ಇನ್ ಕಾರ್ಯಕ್ರಮಕ್ಕೆ ಕರೆ ಮಾಡಿದವರ ವಿವರವನ್ನು ಗುಪ್ತವಾಗಿ ಇಡಲಾಗುವುದು.

ಉಡುಪಿ ಜಿಲ್ಲೆಗೆ ಈ ಹಿಂದೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಪಾಟೀಲ್ ಅವರು ನೇರ ಫೋನ್ ಇನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು ಆ ಬಳಿಕ ಆಗಮಿಸಿ ಲಕ್ಷ್ಮಣ್ ನಿಂಬರಗಿ ಅವರು ಫೋನ್ ಇನ್ ಕಾರ್ಯಕ್ರಮವನ್ನು ಮುಂದುವರೆಸಿದ್ದು ತುಂಬಾ ಮೆಚ್ಚುಗೆಯನ್ನು ಪಡೆಯಲು ಕೂಡ ಕಾರಣವಾಗಿತ್ತು. ಪ್ರಸ್ತುತ ನೂತನವಾಗಿ ಆಗಮಿಸಿರುವ ಎಸ್ಪಿ ನಿಶಾ ಜೇಮ್ಸ್ ಕೂಡ ನೇರ ಫೋನ್ ಇನ್ ಕಾರ್ಯಕ್ರಮವನ್ನು ಮುಂದುವರಿಸಿದ್ದಾರೆ. ಅದರಂತೆ ಶುಕ್ರವಾರ ತಮ್ಮ ಮೊದಲ ಫೋನ್ ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.


Spread the love