Home Mangalorean News Kannada News ಮಾರ್ಚ್ 31ರವರೆಗೆ ಬೆಂಗಳೂರು ಸೇರಿ ರಾಜ್ಯದ 9 ಜಿಲ್ಲೆಗಳು ಲಾಕ್‌ ಡೌನ್

ಮಾರ್ಚ್ 31ರವರೆಗೆ ಬೆಂಗಳೂರು ಸೇರಿ ರಾಜ್ಯದ 9 ಜಿಲ್ಲೆಗಳು ಲಾಕ್‌ ಡೌನ್

Spread the love

ಮಾರ್ಚ್ 31ರವರೆಗೆ ಬೆಂಗಳೂರು ಸೇರಿ ರಾಜ್ಯದ 9 ಜಿಲ್ಲೆಗಳು ಲಾಕ್‌ ಡೌನ್

ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕದ 6 ಜಿಲ್ಲೆಗಳು ಸೇರಿ ದೇಶದ 75 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಬಂದ್ ಮಾಡಲು ಆದೇಶ ಹೊರಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಧಾನಿ ಬೆಂಗಳೂರು ಸೇರಿ ಬೆಂಗಳೂರು ಗ್ರಾಮಾಂತರ , ಮೈಸೂರು, ಕಲಬುರಗಿ, ಚಿಕ್ಕಬಳ್ಳಾಪುರ, ಧಾರವಾಡ, ಮಂಗಳೂರು, ಬೆಳಗಾವಿ, ಕೊಡಗು ಜಿಲ್ಲೆಗಳು ಸಂಪೂರ್ಣ ಲಾಕ್‌ಡೌನ್ ಆಗಲಿವೆ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಕೋವಿಡ್-19 ಪ್ರಕರಣ ಕಂಡುಬಂದಿರುವ ಈ 9 ಜಿಲ್ಲೆಗಳಲ್ಲಿ ವೈದ್ಯಕೀಯ, ಔಷಧಿ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಇತರೆ ವಾಣಿಜ್ಯ ಚಟುವಟಿಕೆಗಳಿಗೆ ಮಾರ್ಚ್ 31ರವರೆಗೆ ನಿರ್ಬಂಧ ಹೇರಲಾಗಿದೆ.


Spread the love

Exit mobile version