ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಸ್ವತಃ ಫೀಲ್ಡಿಗಿಳಿದ ಉಡುಪಿ ಜಿಲ್ಲಾಧಿಕಾರಿ
ಉಡುಪಿ: ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆಯ ನಡುವೆಯೂ ಮಾಸ್ಕ್ ಧರಿಸದೆ ತಿರುಗಾಡುವವರಿಗೆ ಉಡುಪಿ ಜಿಲ್ಲಾಧಿಕಾರಿಗಳೇ ಸ್ವತಃ ಫೀಲ್ಡಿಗಿಳಿದು ದಂಡ ಹಾಕಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸುವಂತೆ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಜಿ ಜಗದೀಶ್ ಅವರ ಜೊತೆಯಲ್ಲಿ , ಉಡುಪಿ ನಗರಸಭೆ ಮತ್ತು ಪೊಲೀಸ್ ಇಲಾಖೆ ವತಿಯಿಂದ ಮಾಸ್ಕ್ ಧರಿಸಿದವರ ವಿರುದ್ಧ ಲಯನ್ಸ್ ಸರ್ಕಲ್ ಬಳಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿದರು.
ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂಬ ಸೂಚನೆಯಿದ್ದರೂ ಮಾಸ್ಕ್ ರಹಿತವಾಗಿ ತಿರುಗಾಡುವವರಿಗೆ ಈ ವೇಳೆ ನಿಲ್ಲಿಸಿ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.
ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸುವ ಕಾರ್ಯ ಮುಂದಿನ ತೀವ್ರಗೊಳಿಸಲಾಗುತ್ತಿದ್ದು ಸಾರ್ವಜನಿಕರಿಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರಸಭೇ, ಪೊಲೀಸ್ ಇಲಾಖೆ ಜಂಟಿಯಾಗಿ ದಂಡ ವಿಧಿಸಲಾಗುವುದು ಎಂದರು.
ಈ ವೇಳೆ ನಗರಸಭೆಯ ಪೌರಾಯುಕ್ತ ಆನಂದ ಕಲ್ಲೋಳಿಕರ್, ಉಡುಪಿ ಡಿವೈಎಸ್ಪಿ ಜೈ ಶಂಕರ್ ಹಾಗೂ ನಗರಸಭೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.