Home Mangalorean News Kannada News ಮಾ10: ಉಡುಪಿ ಕಾಂಗ್ರೆಸ್ ವತಿಯಿಂದ ಪರಿವರ್ತನಾ ಸಮಾವೇಶ; ಸಿದ್ದರಾಮಯ್ಯ, ಸೇರಿ ಹಲವರು ಭಾಗಿ

ಮಾ10: ಉಡುಪಿ ಕಾಂಗ್ರೆಸ್ ವತಿಯಿಂದ ಪರಿವರ್ತನಾ ಸಮಾವೇಶ; ಸಿದ್ದರಾಮಯ್ಯ, ಸೇರಿ ಹಲವರು ಭಾಗಿ

Spread the love

ಮಾ10: ಉಡುಪಿ ಕಾಂಗ್ರೆಸ್ ವತಿಯಿಂದ ಪರಿವರ್ತನಾ ಸಮಾವೇಶ; ಸಿದ್ದರಾಮಯ್ಯ, ಸೇರಿ ಹಲವರು ಭಾಗಿ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾರ್ಚ್ 10ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಕಲ್ಸಂಕ ಬಳಿಯ ರಾಯಲ್ ಗಾರ್ಡನ್ ನಲ್ಲಿ ಪರಿವರ್ತನಾ ಸಮಾವೇಶ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.

ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಡುಪಿ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಹಾಗೂ ಕಾರ್ಯಕರ್ತರಿಗೆ ತಿಳಿಸಲು ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಆಡಳಿತ ವೈಫಲ್ಯದೊಂದಿಗೆ ಭ್ರಷ್ಠಾಚಾರ ಹಾಗೂ ಹಗರಣಗಳನ್ನು ಜನತೆ ಮನವರಿಕೆ ಮಾಡಲು ಪರಿವರ್ತನಾ ಯಾತ್ರೆ ಹಾಗೂ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.

ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಹೆಚ್ ಕೆ ಪಾಟೀಲ್, ಕೆಪಿಸಿಸಿ ಕಾರ್ಯಧ್ಯಕ್ಷರಾದ ಈಸ್ವರ್ ಖಂಡ್ರೆ, ಎಐಸಿಸಿ ಕಾರ್ಯದರ್ಶಿ ಪಿಸಿ ವಿಷ್ಣುನಾಥನ್, ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವೆ ಡಾ|ಜಯಮಾಲಾ ಮಾಜಿ ಸಚಿವರುಗಳಾದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಜಿಲ್ಲೆಯ ಮಾಜಿ ಶಾಸಕರುಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಎಮ್ ಎ ಗಫೂರ್, ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಉಸ್ತುವಾರಿ ಜಿ ಬಾವಾ, ಜಿಲ್ಲಾ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ನಾಯಕರಾದ ಕಿಶನ್ ಹೆಗ್ಡೆ ಕೊಳಕೆಬೈಲು, ಹರೀಶ್ ಕಿಣಿ, ಹಬೀಬ್ ಆಲಿ, ಭಾಸ್ಕರ್ ರಾವ್ ಕಿದಿಯೂರು, ಶಶಿಧರ್ ಶೆಟ್ಟಿ, ನರಸಿಂಹ ಮೂರ್ತಿ, ಯತೀಶ್ ಕರ್ಕೇರಾ, ವಿಶ್ವಾಸ್ ಅಮೀನ್ ಉಪಸ್ಥಿತರಿದ್ದರು.


Spread the love

Exit mobile version