Home Mangalorean News Kannada News ಮೀನುಗಾರಿಕಾ ಬಂದರು ಅಭಿವೃದ್ಧಿಗೆ ಒತ್ತು: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮೀನುಗಾರಿಕಾ ಬಂದರು ಅಭಿವೃದ್ಧಿಗೆ ಒತ್ತು: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

Spread the love

ಮೀನುಗಾರಿಕಾ ಬಂದರು ಅಭಿವೃದ್ಧಿಗೆ ಒತ್ತು: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ನಗರದ ಬಂದರು ಮೀನುಗಾರಿಕೆ ಧಕ್ಕೆ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಅವರು ಶನಿವಾರ ಧಕ್ಕೆಯಲ್ಲಿ ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘ ಹಾಗೂ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಧಕ್ಕೆ ಅಭಿವೃದ್ಧಿಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಸರಕಾರದೊಂದಿಗೆ ಹಾಗೂ ರಾಜ್ಯ ಮೀನುಗಾರಿಕಾ ಸಚಿವರೊಂದಿಗೆ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಇರುವ ಏಕೈಕ ಪ್ರಮುಖ ಬಂದರು ಇದಾಗಿದ್ದು, ಸಾವಿರಾರು ಮಂದಿಗೆ ಬದುಕು ನೀಡಿದೆ. ಪಾಕಿರ್ಂಗ್ ಸೇರಿದಂತೆ ಪ್ರಮುಖ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ಧಕ್ಕೆ ಸಮೀಪದ ಮಹಾನಗರಪಾಲಿಕೆ ಸ್ಥಳವನ್ನು ಪಾಕಿರ್ಂಗ್‍ಗೆ ಬಳಸಲು ಪರಿಶೀಲಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿ.ಪಂ. ಸಿಇಓ ಡಾ. ಆನಂದ್, ಮಾಜಿ ಶಾಸಕ ಜೆ.ಆರ್.ಲೋಬೋ, ಸ್ಥಳೀಯ ಕಾಪೆರ್Çೀರೇಟರ್ ಅಬ್ದುಲ್ ಹಕೀಂ, ಮೀನುಗಾರ ಮುಖಂಡರಾದ ಚೇತನ್ ಬೆಂಗ್ರೆ, ಮೋಹನ್ ಬೆಂಗ್ರೆ ಮತ್ತಿತರರು ಇದ್ದರು.

ಸಚಿವರು ಇದಕ್ಕೂ ಮೊದಲು ಮೀನುಗಾರಿಕೆ ಧಕ್ಕೆ, ಅಳಿವೆ ಬಾಗಿಲು, ಮೀನು ಹರಾಜು ಕೇಂದ್ರ, ಮಾರಾಟ ಕೇಂದ್ರ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬೋಟ್ ಮಾಲೀಕರು ಮತ್ತು ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಸಮಸ್ಯೆಗಳನ್ನು ಆಲಿಸಿದರು.


Spread the love

Exit mobile version