ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸಂಭವ ; ಎಚ್ಚರಿಕೆ ಸೂಚನೆ

Spread the love

ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸಂಭವ  ; ಎಚ್ಚರಿಕೆ ಸೂಚನೆ

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಬೀಳುವ ಸಂಭವವಿರುತ್ತದೆಂದು ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ), ಕಂದಾಯ ಇಲಾಖೆ, ಬೆಂಗಳೂರು ಇವರಿಂದ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ಬಂದಿದೆ.

ಅದರಂತೆ, ಮುಂದಿನ ಎರಡು ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಯಾವುದೇ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಅಥವಾ ನದಿ ಪ್ರಾತಕ್ಕೆ ತೆರಳದಂತೆ ಸೂಚಿಸಿದೆ ಹಾಗೂ ತಗ್ಗು ಪ್ರದೇಶದಲ್ಲಿ, ನದಿ ಪಾತ್ರದಲ್ಲಿ ಹಾಗೂ ನದಿ ತೀರದಲ್ಲಿ ವಾಸಿಸುವ ಸಾರ್ವಜನಿಕರು ಸಹ ತಗ್ಗು ಪ್ರದೇಶ/ ನದಿ ಪಾತ್ರ/ನದಿ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.


Spread the love