Spread the love
ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ: ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್
ಮಂಗಳೂರು: ಅರಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ, ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಸೂಚನೆ ನೀಡಿದೆ. ಸಾರ್ವಜನಿಕರು ಈ ಅವಧಿಯಲ್ಲಿ ಮುಂಜಾಗ್ರತಾ ಕ್ರಮ ವಹಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆ ಸೂಚನೆ ನೀಡಿರುವಂತೆ ಕರಾವಳಿಯಲ್ಲಿ ಹಿಂಗಾರು ಮಳೆ ಗುರುವಾರ ಮತ್ತಷ್ಟು ಬಿರುಸುಗೊಂಡಿದೆ
Spread the love