Home Mangalorean News Kannada News ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಸೃಜನೆ ಯೋಜನೆ – ಅರ್ಜಿ ಆಹ್ವಾನ

ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಸೃಜನೆ ಯೋಜನೆ – ಅರ್ಜಿ ಆಹ್ವಾನ

Spread the love

ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಸೃಜನೆ ಯೋಜನೆ – ಅರ್ಜಿ ಆಹ್ವಾನ

ಮಂಗಳೂರು : ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು ಮೂಲಕ 2018-19ನೇ ಸಾಲಿನಲ್ಲಿ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಸೃಜನೆ ಯೋಜನೆಯಡಿಯಲ್ಲಿ ಬ್ಯಾಂಕಿನ ಆರ್ಥಿಕ ಸಾಲದ ಮೂಲಕ ಅರ್ಹ ಫಲಾನುಭವಿಗಳಿಗೆ ಅವಕಾಶ ಕಲ್ಪಿಸಲಾಗುವುದು.

ಈ ಯೋಜನೆಯ ಮುಖ್ಯಾಂಶಗಳು:- ರಾಜ್ಯದ ರೆವಿನ್ಯೂ ದಾಖಲಾತಿಗಳ ಪ್ರಕಾರ ವರ್ಗೀಕರಿಸುವ ಯಾವುದೇ ಗ್ರಾಮೀಣ ಪ್ರದೇಶ ಮತ್ತು 2001 ರ ಜನಗಣತಿಯಲ್ಲಿ 20000 ಜನರಿಗಿಂತ ಕಡಿಮೆ ಇರುವ ಪಟ್ಟಣವೆಂದು ವರ್ಗೀಕರಿಸಿರುವ ಪ್ರದೇಶದಲ್ಲಿನ ಅಭ್ಯರ್ಥಿಗಳು ಅರ್ಹವಿರುತ್ತಾರೆ. ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಸಾಮಾನ್ಯ ವರ್ಗದವರಿಗೆ. ಹಾಗೂ ಗರಿಷ್ಠ 45 ವರ್ಷ ವಿಶೇಷ ವರ್ಗದವರಿಗೆ. (ಮಹಿಳೆ / ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ/ ಹಿಂದುಳಿದ ವರ್ಗ/ ಅಲ್ಪ ಸಂಖ್ಯಾತರು / ಮಾಜಿ ಯೋದರು / ಅಂಗವಿಕಲರು). ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. (ರೂ.5 ಲಕ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಯೋಜನೆಗಳು), ಯಾವುದೇ ಆದಾಯದ ಮಿತಿ ಇರುವುದಿಲ್ಲ. ಪ್ರಥಮ ಪೀಳಿಗೆ ಉದ್ಯಮಶೀಲರಿಗೆ ಮಾತ್ರ ಪ್ರತಿ ಘಟಕಕ್ಕೆ ಗರಿಷ್ಠ 10 ಲಕ್ಷ ಯೋಜನಾ ವೆಚ್ಚದ ಕಿರು ಉತ್ಪಾದನಾ ಘಟಕಗಳನ್ನು ಹಾಗೂ ಸೇವಾ ಉದ್ಯಮಗಳನ್ನು ಪ್ರಾರಂಭಿಸಲು ವಿವಿಧ ಹಣಕಾಸು ಸಂಸ್ಥೆಗಳ ಮೂಲಕ ಸಾಲ ನೀಡಲಾಗುವುದು. ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯದಿಂದ ಸಾಮಾನ್ಯ ವರ್ಗದ ಉದ್ಯಮಶೀಲರಿಗೆ ಯೋಜನಾ ವೆಚ್ಚದ ಶೇಕಡ 25 ರಷ್ಟು (ಗರಿಷ್ಠ ರೂ.2,50,000/- ರ ವರೆಗೆ) ಹಾಗೂ ವಿಶೇಷ ವರ್ಗದ ಉದ್ಯಮಶೀಲರಿಗೆ ಯೋಜನಾ ವೆಚ್ಚದ ಶೇಕಡ 35 ರಷ್ಟು (ಗರಿಷ್ಟ ರೂ.3,50,000/- ವರೆಗೆ) ಸಹಾಯಧನವನ್ನು ನೀಡಲಾಗುವುದು.

ಈ ಯೋಜನೆಯನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ಯಾಡಿ,ಮಂಗಳೂರು ಹಾಗೂ ಜಿಲ್ಲಾ ಅಧಿಕಾರಿಗಳು, ಖಾದಿ ಗ್ರಾಮೋದ್ಯೋಗ ಮಂಡಳಿ, ಮಂಗಳೂರು ಇವರ ಮೂಲಕ ಅನುಷ್ಟಾನಗೊಳಿಸಲಾಗುತ್ತಿದ್ದು ಅರ್ಹತೆಯುಳ್ಳ ಆಸಕ್ತ ಯುವಜನರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಎಲ್ಲಾ ದಾಖಲೆಗಳೊಂದಿಗೆ ಸಲ್ಲಿಸಲು ಕೊನೆಯ ದಿನ ನವೆಂಬರ್ 13.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ಯಾಡಿ, ಮಂಗಳೂರು ಇವರ ಕಚೇರಿ ದೂರವಾಣಿ ಸಂಖ್ಯೆ: 0824-2214021 ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.


Spread the love

Exit mobile version