ಮುಜುಗರದ ಘಟನೆ: ಭ್ರಷ್ಟಾಚಾರದಲ್ಲಿ ಬಿಎಸ್‌ವೈ ಸರಕಾರ No-1 ಎಂದ ಅಮಿತ್ ಶಾ!
ದಾವಣಗೆರೆ: ಭ್ರಷ್ಟಾಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ನಂಬರ್ 1 ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮುಜುಗರಕ್ಕೊಳಗಾದ ಘಟನೆ ನಡೆದಿದೆ.
ದಾವಣಗೆರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಮಿತ್ ಶಾ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಗಳನ್ನು ವಿವರಿಸುತ್ತಿದ್ದ ಸಂದರ್ಭದಲ್ಲಿ ‘ಇತ್ತೀಚೆಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರೊಬ್ಬರು ಭ್ರಷ್ಟಾಚಾರದ ಸ್ಪರ್ಧೆಯಲ್ಲಿ ಯಡಿಯೂರಪ್ಪನವರ ಸರಕಾರ ನಂಬರ್ 1 ಸ್ಥಾನದಲ್ಲಿದೆ ಎಂದು ಹೇಳುವ ಮೂಲಕ ಎಡವಟ್ಟು ಮಾಡಿಕೊಂಡರು. ತಕ್ಷಣವೇ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಅವರು ಶಾ ಕಿವಿಯಲ್ಲಿ ಪಿಸುಗುಟ್ಟಿದ ನಂತರ ಹೇಳಿಕೆಯನ್ನು ಸರಿಪಡಿಸಿಕೊಂಡು ಸಿಎಂ ಸಿದ್ದರಾಮಯ್ಯರ ಸರಕಾರ ಭ್ರಷ್ಟಾಚಾರದಲ್ಲಿ ನಂಬರ್ 1 ಎಂದರು.