Spread the love
ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಸ್ನೇಹಮಯಿ ಅರ್ಜಿ ವಜಾ
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
Spread the love