ಮುಡಿಪು: ಡಿವೈಡರ್ ಗೆ ಬೈಕ್ ಢಿಕ್ಕಿ, ಗಾಯಾಳು ಸವಾರ ರೋಷನ್ ಮೊರಾಸ್ ಮೃತ್ಯು
ಕೊಣಾಜೆ: ಮುಡಿಪು ಸಮೀಪದ ಬೋಳಿಯಾರ್ ಬಳಿ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ವರ್ಕಾಡಿ ಗ್ರಾಮದ ನಲೆಂಗಿ ನಿವಾಸಿ ರೋಷನ್ ಮೊರಾಸ್ (34) ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ರೋಷನ್ ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯವಾಗಿತ್ತು ಎನ್ನಲಾಗಿದೆ. ಸ್ಥಳೀಯರು ತಕ್ಷಣ ಮಂಗಳೂರಿನ ಪಡೀಲಿನ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೇತರಿಸಿಕೊಳ್ಳದೆ ಗುರುವಾರ ಸಂಜೆ ಸಾವನ್ನಪ್ಪಿದ್ದಾರೆ.
ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.