ಮುಮ್ತಾಝ್ ಅಲಿ ಪ್ರಕರಣ : ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

Spread the love

ಮುಮ್ತಾಝ್ ಅಲಿ ಪ್ರಕರಣ : ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಸುರತ್ಕಲ್: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ  ಪೊಲೀಸರ ತಂಡ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಮುಮ್ತಾಝ್ ಅಲಿ ಸಾವು ಪ್ರಕರಣದಕ್ಕೆ ಸಂಬಂಧಿಸಿ A1 ಆರೋಪಿ ಸುರತ್ಕಲ್ ಕೃಷ್ಣಾಪುರ 7 ನೇ ಬ್ಲಾಕ್ ನಿವಾಸಿ ರೆಹಮತ್ (41) ಆಕೆಯ ಪತಿ A5 ಆರೋಪಿ ಶುಐಬ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ರೆಹಮತ್ ಮತ್ತು ಆಕೆಯ ಪತಿ ಶುಐಬ್ನನ್ನು ಬಂಟ್ವಾಳದ ಮೆಲ್ಕಾರ್ ಬಳಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿ ಮಮ್ತಾಝ್ ಅಲಿ ಅವರ ಸಹೋದರ ಹೈದರ್ ಅಲಿ ಎಂಬವರು ರೆಹಮತ್, ಅಬ್ದುಲ್ ಸತ್ತಾರ್, ಕಲಂದರ್ ಶಾಫಿ, ಮುಸ್ತಫಾ, ಶುಐಬ್, ಸಿರಾಜ್ ಎಂಬವರು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದರು. ಅವರ ದೂರು ಆಧರಿಸಿ ಐಪಿಸಿ 308(2), 308(5), 352, 351(2) 190 ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಸದ್ಯ ಪ್ರಕರಣದಲ್ಲಿನ ಪ್ರಮುಖ A1 ಆರೋಪಿ ಸಹಿತ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಮೇಲಿನ ಆರೋಪಿತರನ್ನು ಮಂಗಳೂರು ನಗರದ  ಪೊಲೀಸ್ ಆಯುಕ್ತರಾದ  ಅನುಪಮ್ ಅಗರ್ವಾಲ್ ಐ.ಪಿ.ಎಸ್ ರವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯನ್ನು ಡಿ.ಸಿ.ಪಿಗಳಾದ  ಸಿದ್ದಾರ್ಥ್ ಗೋಯಲ್, ಐ.ಪಿ.ಎಸ್.. ಮತ್ತು  ದಿನೇಶ್ ಕುಮಾರ್ ರವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ  ಶ್ರೀಕಾಂತ್ ರವರ ನೇತೃತ್ವದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ  ರಾಘವೇಂದ್ರ ಎಮ್. ಬೈಂದೂರು, ಉಪ ನಿರೀಕ್ಷಕರುಗಳಾದ   ಮಲ್ಲಿಕಾರ್ಜುನ ಬಿರಾದಾರ,  ನಳಿನಿ ಹಾಗೂ ಸಿಬ್ಬಂಧಿಯವರಾದ ನಾಗರತ್ನ.ಸಿ. ಪ್ರವೀಣ್ ರವರುಗಳು ಈ ಪತ್ತೆ ಕಾರ್ಯ ಮಾಡಿರುತ್ತಾರೆ.


Spread the love
Subscribe
Notify of

0 Comments
Inline Feedbacks
View all comments