Spread the love
ಮುರಿದು ಬಿದ್ದ ಮಂಗಳೂರು-ಬಂಟ್ವಾಳ ಸಂಪರ್ಕ ಫಲ್ಗುಣಿ ಸೇತುವೆ
ಬಂಟ್ವಾಳ: ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿದ ಪರಿಣಾಮ ಬಂಟ್ವಾಳ ಮತ್ತು ಮಂಗಳೂರು ಸಂಪರ್ಕದ ಮುಲಾರಪಟ್ನದ ಫಲ್ಗುಣಿ ಸೇತುವೆಯು ಸೋಮವಾರ ಸಂಜೆ ಮರಿದು ಬಿದ್ದಿದೆ.
ಬಂಟ್ವಾಳ ಸೋರ್ನಾಡು ಮೂಲಕ ಮಂಗಳೂರು ಕುಪ್ಪೆಪದವು ಕೈಕಂಬ, ಕಟೀಲು, ಇರುವೈಲು, ಎಡಪದವು, ಗಂಜಿಮಠ, ಸುರತ್ಕಲ್ ಸೇರಿದಂತೆ ಹಲವು ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಮುಲಾರಪಟ್ನದ ಈ ಸೇತುವೆ ಕುಸಿದು ಬಿದ್ದಿದ್ದು, ಈ ಭಾಗದ ಜನರಿಗೆ ಸಂಪರ್ಕ ಕಡಿತಗೊಂಡಿದೆ.
ಘಟನೆಯಿಂದ ಯಾವುದೇ ಅಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
Spread the love