Home Mangalorean News Kannada News ಮುಲ್ಕಿ: ರೈಲಿನಲ್ಲಿ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

ಮುಲ್ಕಿ: ರೈಲಿನಲ್ಲಿ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

Spread the love

ಮುಲ್ಕಿ: ರೈಲಿನಲ್ಲಿ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

ಮುಲ್ಕಿ: ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರದ ಕುಮಾರಪೇಟೆ ನಿವಾಸಿ ಅಮೀರ್ ಖಾನ್ ಎಂಬುವರ ಪುತ್ರ ಮೌಜಾಮ್(35) ಕೊಲೆಯಾದ ಯುವಕ.

ಮೃತ ಮೌಜಾಮ್ ಸೇಲ್ಸ್ ರೆಪ್ ಕೆಲಸ ಮಾಡುತ್ತಿದ್ದು, ಈತ ಬೆಂಗಳೂರಿನಿಂದ ಮುರ್ಡೇಶ್ವರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆನ್ನಲಾಗಿದೆ. ಅವರ ಕೈಯಲ್ಲಿದ್ದ ಹಣದ ಬ್ಯಾಗ್ ಮತ್ತು ಮೊಬೈಲ್ ಸುಲಿಗೆ ಮಾಡುವ ಉದ್ದೇಶದಿಂದ ದುಷ್ಕರ್ಮಿಗಳು ಯಾವುದೋ ಸಾಧನದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಉಡುಪಿಯ ರೈಲ್ವೆ ಬೋಗಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಮೌಜಾಮ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದು, ವೈದ್ಯರು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದು ತಿಳಿದು ಬಂದಿದೆ. ಈ ನಡುವೆ ಮೃತರ ಮೊಬೈಲ್ ಲೊಕೇಶನ್ ಸಕಲೇಶಪುರದಲ್ಲಿ ಕೊನೆಯ ಸಂಪರ್ಕ ಕಂಡುಬಂದಿದ್ದು, ಸಕಲೇಶಪುರ ಆಸುಪಾಸಿನಲ್ಲಿ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮೃತ ಸಂಬಂಧಿ ಆರಿಫ್ ಉಲ್ಲಾಖಾನ್ ಮುಲ್ಕಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


Spread the love

Exit mobile version