ಮೂಡಬಿದ್ರೆ: ಬೈಕ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ

Spread the love

ಮೂಡಬಿದ್ರೆ: ಬೈಕ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಬೈಕ್ ಕಳ್ಳತನ ಮಾಡಿದ್ದ ಆರೋಪದ ಮೇಲೆ ಮೂಡಬಿದ್ರೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮೂಡಬಿದ್ರೆ ನಿವಾಸಿ ಸಯ್ಯದ್ ಝಾಕೀರ್ (20) ಮತ್ತು ಮೊಹಮ್ಮದ್ ಶಾಹೀಮ್ (24) ಎಂದು ಗುರುತಿಸಲಾಗಿದೆ

ಮೂಡಬಿದ್ರೆ ಪೊಲೀಸ್ ನಿರೀಕ್ಷಕರಿಗೆ ನವೆಂಬರ್ 7 ರಂದು ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಅವರು ಹಾಗೂ ಅವರ ಠಾಣಾ ಸಿಬ್ಬಂಧಿಯವರು ಬೆಳಗಿನ ಜಾವ ಮೂಡಬಿದ್ರೆ ಠಾಣ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಬಳಿ ಇರುವ ಕೊಂಡೆ ಸ್ಟ್ರೀಟ್ ಎಂಬಲ್ಲಿ , ಇಬ್ಬರು ಯುವಕರನ್ನು ಹಾಗೂ ಅವರ ವಶದಲ್ಲಿದ್ದ ನಂಬ್ರ ಪ್ಲೇಟ್ ಇಲ್ಲದ ರಾಯಲ್ ಎನ್ ಫಿಲ್ಡ್ ಕ್ಲಾಸಿಕ್ 350 ಮೋಟಾರು ಸೈಕಲಿನ ಸಮೇತ ವಶಕ್ಕೆ ಪಡೆದು ಠಾಣೆಗೆ ಕರೆ ತಂದು ಕೂಲಂಕುಶವಾಗಿ ವಿಚಾರಣೆ ಮಾಡಿದಾಗ ಅವರ ವಶದಲ್ಲಿದ್ದ ರಾಯಲ್ ಎನ್ ಫಿಲ್ಡ್ ಕ್ಲಾಸಿಕ್ 350 ಮೋಟಾರು ಸೈಕಲನ್ನು ಆರೋಪಿಗಳು ದಿನಾಂಕ: 24/25-10-2023 ರಂದು ಮಧ್ಯರಾತ್ರಿ ಮೂಡಬಿದ್ರೆ ಜೈನ್ ಪೇಟೆಯ ಬಡಗ ಬಸದಿ ಎದುರು ಇರುವ ದೇವಿ ಕೃಪಾ ಅಪಾರ್ಟ್ ಮೆಟ್ ನ ಪಾರ್ಕಿಂಗ್ ಏರಿಯಾದಲಿ, ನಿಲಿಸಿದನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ.

ಆರೋಪಿಗಳು ವಿಚಾರಣೆಯ ವೇಳೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದಲ್ಲಿರುವ ಎವರ್ ಪ್ರೈಸ್ ರೆಸಿಡೆನ್ಸ್, ಅಪಾರ್ಟ್ ಮೆಂಟ್ ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ KA-19-EU-0009 ನೇ ರಾಯಲ್ ಎನ್ ಫಿಲ್ಡ್ ಕ್ಲಾಸಿಕ್ 350 ಮೋಟಾರು ಸೈಕಲನ್ನು ಕೂಡ ಕಳವು ಮಾಡಿ ಪೇಪರ್ ಮಿಲ್ ಬಳಿ ಇರುವ ಕೀರ್ತಿ ನಗರ ಕ್ರಾಸ್ ಬಳಿ ಪೊದೆಗಳ ಮಧ್ಯೆ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಅಲ್ಲಿಂದ KA-19-EU-0009 ನೇ ರಾಯಲ್ ಎನ್ ಫಿಲ್ಡ್ ಕ್ಲಾಸಿಕ್ 350 ಮೋಟಾರು ಸೈಕಲನ್ನು ಕೂಡ ಸ್ವಾಧೀನಪಡಿಸಿಕೊಂಡಿದ್ದು ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 3,00,000/- ಆಗಿರಬಹುದು

ಈ ಪ್ರಕರಣದಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ರವರ ಮಾರ್ಗದರ್ಶನದಂತೆ, ಡಿಸಿಪಿ ಯವರಾದ ಸಿದಾರ್ಥ ಗೊಯಲ್ (ಕಾ&ಸು), ದಿನೇಶ್ ಕುಮಾರ್ ಡಿಸಿಪಿ (ಅ & ಸಂ) ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ರವರ ನಿರ್ದೇಶನದಂತೆ, ಈ ಕಾರ್ಯಚರಣೆಯಲ್ಲಿ, ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂಧಿಯವರಾದ ಮೊಹಮ್ಮದ್ ಇಟ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್, ವೆಂಕಟೇಶ್ ಮತ್ತು ಚಂದ್ರಹಾಸ ರೈ ರವರುಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.


Spread the love