Home Mangalorean News Kannada News ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ನಾಮಪತ್ರ ಸಲ್ಲಿಕೆ

ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ನಾಮಪತ್ರ ಸಲ್ಲಿಕೆ

Spread the love

ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ನಾಮಪತ್ರ ಸಲ್ಲಿಕೆ

ಉಡುಪಿ: ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿನ ಉಪ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾರವರು ಡಿ.15ರಂದು ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ನಗರಸಭೆಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಗರಸಭಾ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

Exit mobile version