ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ; ದಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ
ಮಂಗಳೂರು: ರಾಜಸ್ಥಾನ ಮಧ್ಯಪ್ರದೇಶ, ಛತ್ತೀಸ್ ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಮಂಗಳವಾರ ದಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂದೆ ಪಕ್ಷದ ಕಾರ್ಯಕರ್ತರು, ನಾಯಕರು ವಿಜಯೋತ್ಸವ ಆಚರಿಸಿದರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಜೆ ಆರ್ ಲೋಬೊ ಕಾಂಗ್ರೆಸ್ ಪಕ್ಷ ಮೂರು ರಾಜ್ಯಗಳಲ್ಲಿ ಮುನ್ನಡೆಯುನ್ನು ಸಾಧಿಸಿದೆ. ಬಿಜೆಪಿ ತನ್ನ ಕೆಲವೊಂದು ತಪ್ಪು ನಿರ್ಧಾರಗಳಿಂದಾಗಿ ದೇಶವನ್ನು ಹಿನ್ನಡೆಯಾಗಿಸಿದೆ. ದೇಶದ ಜನ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇರಿಸಿ ಮತ ಚಲಾಯಿಸಿದ್ದಾರೆ. ಮೂರು ರಾಜ್ಯಗಳಲ್ಲೂ ಕಾಂಗ್ರೆಸ್ ಸರಕಾರ ರಚಿಸಲಿದ್ದು, ಈ ವಿಜಯ ಮುಂದಿನ ಲೋಕಸಭಾ ಚುನಾವಣೆಗೆ ಮುನ್ನುಡಿಯಾಗಿದೆ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ ದೇಶದ ರೈತರು ಹಾಗೂ ಮಧ್ಯಮ ವರ್ಗದ ಜನ ಸದಾ ಕಾಂಗ್ರೆಸ್ ಪಕ್ಷದೊಂದಿಗೆ ಇರುವುದು ಮತ್ತೊಮ್ಮೆ ಸಾಬೀತಾಗಿದೆ. ಕಾರಣ ಬಿಜೆಪಿ ಸರಕಾರ ಅವರಿಗೆ ಕೇವಲ ಭರವಸೆಗಳನ್ನು ನೀಡಿ ಮೋಸ ಮಾಡಿದೆ. ಈ ಬಾರಿ ಮೂರು ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಮತಗಳನ್ನು ನೀಡಿದ್ದದಾರೆ ಅಲ್ಲದೆ ಮೋದಿಯ ಅಚ್ಚೇ ದಿನ್ ಅನ್ನು ತಿರಸ್ಕರಿಸಿದ್ದಾರೆ ಎಂದರು.
ನಾಯಕರಾದ ಇಬ್ರಾಹಿಂ ಕೋಡಿಜಾಲ್, ಶಶಿಧರ ಹೆಗ್ಡೆ, ಶಾಲೆಟ್ ಪಿಂಟೊ ಹಾಗೂ ಇತರರು ಉಪಸ್ಥಿತರಿದ್ದರು