Spread the love
ಮೇ 13 ರಂದು ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ಜನಮನ
ಉಡುಪಿ: ರಾಜ್ಯ ಸರ್ಕಾರಕ್ಕೆ ಮೇ 13 ರಂದು ನಾಲ್ಕು ವರ್ಷ ಪೂರ್ಣಗೊಳಿಸಿದ ಸಂಭ್ರಮ. ಸರ್ಕಾರ ಜಾರಿಗೊಳಿಸಿರುವ ಜನಪರ ಯೋಜನೆಗಳ ಬಗ್ಗೆ ಈ ದಿನ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಲಿರುವರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಜಿಲ್ಲಾಡಳಿತದ ಸಹಕಾರದೊಂದಿಗೆ ಕಾರ್ಯಕ್ರಮ ನಡೆಸಲಿದ್ದು, ಸರ್ಕಾರದ ಯೋಜನೆಗಳ ಬಗ್ಗೆ ನೇರ ಅನಿಸಿಕೆ ಸಂಗ್ರಹ, ಯೋಜನೆಗಳ ಗುಣಾತ್ಮಕ ಬದಲಾವಣೆಗಳ ಅರಿವು ಹಾಗೂ ಜಿಲ್ಲೆಯ ಸಾಧನೆಯ ಬಗ್ಗೆ ಸಮಗ್ರ ಚಿತ್ರಣ ಕಾರ್ಯಕ್ರಮದಲ್ಲಿ ಮೂಡಿ ಬರಲಿದೆ ಎಂದು ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.
Spread the love